ಬೆಂಗಳೂರು: ಸಚಿವ ಜೆ.ಸಿ ಮಾಧುಸ್ವಾಮಿ ಬೇರೆ ಅರ್ಥದಲ್ಲಿ ಹೇಳಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಜೆ.ಸಿ ಮಾಧುಸ್ವಾಮಿ ಸರ್ಕಾರ ನಡೀತಾ ಇಲ್ಲ, ಮ್ಯಾನೇಜ್ಮೆಂಟ್ ಮಾಡುಕೊಂಡು ಹೋಗುತ್ತಿದ್ದೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅವರು ಬೇರೆ ಕಾಂಟೆಸ್ಟ್ನಲ್ಲಿ ಮಾತನಾಡಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಬೇರೆ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು. ಯಾವುದೇ ರೀತಿಯ ತಪ್ಪು ಅರ್ಥ ಮಾಡುವ ಅಗತ್ಯ ಇಲ್ಲ. ಅವರು ಸಹಕಾರ ಇಲಾಖೆ ವಿಚಾರವಾಗಿ ಮಾತ್ರ ಮಾತನಾಡಿದ್ದಾರೆ. ಈಗ ಎಲ್ಲವೂ ಸರಿಯಾಗಿದೆ ಎಂದು ತಿಳಿಸಿದರು.