ಬೆಂಗಳೂರು:ಜಿಎಸ್ಟಿ ಕೌನ್ಸಿಲ್ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ ಸಂಜೆ ವಾಪಸ್ ಆಗಲಿದ್ದು, ಈ ವೇಳೆ ಹೈಕಮಾಂಡ್ನ ಯಾವುದೇ ನಾಯಕರನ್ನು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಹೋಗುತ್ತಿದ್ದೇನೆ, ಸಭೆ ನಂತರ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದೇನೆ ಎಂದರು.