ಕರ್ನಾಟಕ

karnataka

By

Published : Apr 27, 2022, 6:55 AM IST

Updated : Apr 27, 2022, 8:08 AM IST

ETV Bharat / city

ದೆಹಲಿ ಪ್ರವಾಸಕ್ಕೆ ಸಿಎಂ ಸಿದ್ಧತೆ: ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳಿಂದ ಲಾಬಿ ಆರಂಭ..!

ಏ.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಪಡೆಯಲು ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ. ಸಿಪಿ ಯೋಗೇಶ್ವರ್, ಆನಂದ್ ಮಾಮನಿ ಸೇರಿದಂತೆ ಹಲವರು ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ.

cm-bommai-getting-ready-for-delhi-visit
ದೆಹಲಿ ಪ್ರವಾಸಕ್ಕೆ ಸಿಎಂ ಸಿದ್ದತೆ: ಸಚಿವಾಕಾಂಕ್ಷಿಗಳಿಂದ ಲಾಭಿ ಆರಂಭ..!

ಬೆಂಗಳೂರು: ಏಪ್ರಿಲ್ 30ರಂದು ನಡೆಯುವ ಹೈಕೋರ್ಟ್ ಜಡ್ಜ್​​​ಗಳು ಮತ್ತು ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳುತ್ತಿದ್ದು, ಜೊತೆಗೆ ಹೈಕಮಾಂಡ್ ನಾಯಕರನ್ನು ಭೇಟಿ ಆಗುವ ಹಿನ್ನಲೆ, ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬೊಮ್ಮಾಯಿ ಬಳಿ ಲಾಬಿ ನಡೆಸುತ್ತಿದ್ದಾರೆ.

ಏ.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಪಡೆಯಲು ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ. ಸಿಪಿ ಯೋಗೇಶ್ವರ್, ಆನಂದ್ ಮಾಮನಿ ಸೇರಿದಂತೆ ಹಲವರು ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಮತ್ತು ಆನಂದ್ ಮಾಮನಿ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡುವಂತೆ ಪಟ್ಟುಹಿಡಿದಿದ್ದು, ಈ ಬಾರಿ ನಮ್ಮ ಹೆಸರು ಪರಿಗಣಿಸುವಂತೆ ಒತ್ತಡ ಹೇರಿರುವುದಾಗಿ ಹೇಳಲಾಗಿದೆ.

ಏ. 29ರ ಸಂಜೆ ಸಿಎಂ ದೆಹಲಿಗೆ ತೆರಳುತ್ತಿದ್ದು, ಏಪ್ರಿಲ್ 30ರಂದು ಹೈಕೋರ್ಟ್ ಜಡ್ಜ್​​​ಗಳು ಹಾಗೂ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೈಕಮಾಂಡ್ ನಾಯಕರ ಭೇಟಿಗೆ ಸಿಎಂ ಅನುಮತಿ ಕೋರಿದ್ದು, ಇನ್ನು ಭೇಟಿಗೆ ಸಮಯ ನಿಗದಿಯಾಗಿಲ್ಲ. ಹಾಗಾಗಿ ದೆಹಲಿ ಟಿಕೆಟ್ ಕಾಯ್ದಿರಿಸಿರುವ ಸಿಎಂ, ವಾಪಸ್​​ ಬರುವ ಆಯ್ಕೆಯನ್ನು ಕಾಯ್ದಿರಿಸಿಕೊಂಡಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಮಾಜಿ ಸಚಿವ ಈಶ್ವರಪ್ಪ: ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್ ಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಿದ್ದು,ಕೆಲ ನಿಮಿಷಗಳ ಕಾಲ ಸಿಎಂ ಜೊತೆ ಚರ್ಚಿಸಿರುವುದಾಗಿ ತಿಳಿದು ಬಂದಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕದ ಮೊದಲ ಸಿಎಂ ಭೇಟಿ ಇದಾಗಿದೆ.

ಓದಿ :ವಿಡಿಯೋ: ತಿವಿಯಲು ಮುಂದಾದ ಎತ್ತು; ಸಿಎಂ ಬೊಮ್ಮಾಯಿ ಜಸ್ಟ್‌ ಮಿಸ್!

Last Updated : Apr 27, 2022, 8:08 AM IST

ABOUT THE AUTHOR

...view details