ಕರ್ನಾಟಕ

karnataka

ETV Bharat / city

ಇ-ಕನ್ನಡ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ - CM basavaraja Bommai

ಸರ್ಕಾರಕ್ಕೆ ಸಂಬಂಧಿಸಿದ ತಂತ್ರಾಂಶಗಳಲ್ಲಿ ಡಿಫಾಲ್ಟ್ ಕನ್ನಡ ಭಾಷೆಯ ಪುಟಗಳು ತೆರೆದುಕೊಳ್ಳುವಂತೆ ಸದ್ಯದಲ್ಲಿಯೇ ಆದೇಶ ಹೊರಡಿಸಲಾಗುವುದು- ಬಸವರಾಜ ಬೊಮ್ಮಾಯಿ, ಸಿಎಂ

CM Bommai launched E Kannada project
ಇ-ಕನ್ನಡ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

By

Published : May 18, 2022, 8:16 AM IST

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಇ-ಕನ್ನಡ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಇ-ಆಡಳಿತ) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಮತ್ತು ಅವರ ತಂದೆಯನ್ನು ಸನ್ಮಾನಿಸಿದ ಸಿಎಂ ಬೊಮ್ಮಾಯಿ

ಬಳಿಕ ಮಾತನಾಡಿದ ಸಿಎಂ, ಸಮಗ್ರ ಕನ್ನಡ ಜನತೆಯನ್ನು ಒಳಗೊಂಡ ರೀತಿಯಲ್ಲಿ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕವಿರಬೇಕು. ಮುಂದಿನ ಪೀಳಿಗೆಗೆ ಅನುಕೂಲಕರವಾಗುವ ಹಾಗೆ ಕನ್ನಡ ಭಾಷಾಭಿವೃದ್ಧಿ ಒಳಗೊಂಡಂತೆ ಎಲ್ಲ ಆಯಾಮಗಳಲ್ಲೂ ಕನ್ನಡ, ಕನ್ನಡಿಗ, ಕರ್ನಾಟಕ ಅಭ್ಯುದಯವಾಗುವಂತಹ ಅಂಶಗಳು ವಿಧೇಯಕದಲ್ಲಿರಬೇಕು. ಇದಕ್ಕೆ ನಮ್ಮ ಸರ್ಕಾರ ಅಗತ್ಯ ಬೆಂಬಲ ನೀಡಲಿದೆ ಎಂದರು.

ಇದನ್ನೂ ಓದಿ:ಬಡವರಿಗಾಗಿ ರೂಪಿಸಿರುವ ಯೋಜನೆಗಳ ಸಕಾಲಿಕ ಅನುಷ್ಠಾನಕ್ಕೆ ಸಿಎಂ ಸೂಚನೆ

ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ಕ್ಷೇತ್ರದೊಂದಿಗೆ ಭಾಷೆಯ ಬೆಳವಣಿಗೆಯೂ ಆಗಬೇಕು‌. ತಂತ್ರಜ್ಞಾನ ಮತ್ತು ಭಾಷೆ ಜೊತೆಗೂಡಿ ಕಾರ್ಯನಿರ್ವಹಿಸಿದರೆ ಮಾತ್ರವೇ ಭಾಷಾಭಿವೃದ್ಧಿ ಸಾಧ್ಯ. ಹಿಂದೆ ಕನ್ನಡದಲ್ಲಿ ತಂತ್ರಜ್ಞಾನ ಮತ್ತು ತಂತ್ರಾಂಶಕ್ಕೆ ಸಂಬಂಧಿಸಿದ ಮಾಹಿತಿ ಲಭಿಸುತ್ತಿರುತ್ತಿರಲಿಲ್ಲ. ಈಗ ಕನ್ನಡದಲ್ಲಿಯೂ ಹಲವು ತಂತ್ರಾಂಶಗಳು ಸಿಗುತ್ತಿವೆ. ಸರ್ಕಾರಕ್ಕೆ ಸಂಬಂಧಿಸಿದ ತಂತ್ರಾಂಶಗಳಲ್ಲಿ ಡಿಫಾಲ್ಟ್ ಕನ್ನಡ ಭಾಷೆ ಪುಟಗಳು ತೆರೆದುಕೊಳ್ಳುವಂತೆ ಸದ್ಯದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಲಕ್ಷ್ಯ ಸೇನ್‌ಗೆಅಭಿನಂದನೆ: ಥಾಮಸ್ ಕಪ್ ಗೆದ್ದ ಭಾರತ ಬ್ಯಾಡ್ಮಿಂಟನ್‌ ತಂಡ ಪ್ರತಿನಿಧಿಸಿದ್ದ ಲಕ್ಷ್ಯ ಸೇನ್, ಅವರ ತಂದೆಯನ್ನು ಸಿಎಂ, ಸಚಿವ ಡಾ.ನಾರಾಯಣಗೌಡ ಸನ್ಮಾನಿಸಿ 5 ಲಕ್ಷ ರೂ. ಬಹುಮಾನದ ಚೆಕ್ ನೀಡಿದರು.

ABOUT THE AUTHOR

...view details