ಬೆಂಗಳೂರು:ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.