ಬೆಂಗಳೂರು: ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ನವದೆಹಲಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಉಪ ಚುನಾವಣೆ ಕುರಿತು ಮಾತುಕತೆ ನಡೆಸಲಿದ್ದಾರೆ. ಸಿಎಂ ಆದ ನಂತರದ ಚೊಚ್ಚಲ ಉಪ ಚುನಾವಣೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಚರ್ಚಿಸಲಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿ ಪ್ರವಾಸ ಕೈಗೊಳ್ಳಲಿದ್ದು, 10:40ಕ್ಕೆ ನವದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.45 ರಿಂದ ಸಂಜೆ 5.30 ರವರೆಗೆ ಇಂಡಿಯಾ ಟುಡೇ ಸಮೂಹ ಆಯೋಜಿಸುವ ನಾಯಕತ್ವ ಸಮ್ಮೇಳನದ 19ನೇ ಆವೃತ್ತಿ ಇಂಡಿಯಾ ಟುಡೇ ಕಾನ್ ಕ್ಲೇವ್ ನಲ್ಲಿ ಭಾಗವಹಿಸಲಿದ್ದಾರೆ.
ಶುಕ್ರವಾರ ರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ ಉಪ ಚುನಾವಣೆ ಕುರಿತು ಮಾತುಕತೆ ನಡೆಸಲಿದ್ದಾರೆ. ಅಭ್ಯರ್ಥಿಗಳ ಘೋಷಣೆ ನಂತರ ಕ್ಷೇತ್ರದಲ್ಲಿನ ಚಿತ್ರಣ, ಚುನಾವಣೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ. ಇದೇ ದಿನ ರಾತ್ರಿ ಅಥವಾ ಶನಿವಾರ ಬೆಳಗ್ಗೆ ಸಿಎಂ ಬೊಮ್ಮಾಯಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಸಿಎಂ ಮತ್ತೆ ದಿಲ್ಲಿ ಪ್ರವಾಸ... ಹೈಕಮಾಂಡ್ ಜೊತೆ ಬೊಮ್ಮಾಯಿ ಚರ್ಚೆ!
ಉಪ ಚುನಾವಣೆ ಕುರಿತು ಮಾತುಕತೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
cm bommai