ಕರ್ನಾಟಕ

karnataka

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ ಭರವಸೆ

By

Published : Nov 9, 2021, 12:46 PM IST

ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ ಎಂದು ಸಿಎಂ ತಿಳಿಸಿದ್ದಾರೆ.

kannada bhavana will be constructed at goa
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಗೋವಾ ಕನ್ನಡ ಮಹಾಸಂಘ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬೆಂಗಳೂರಿನಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಗೋವಾ ಕನ್ನಡ ಮಹಾಸಂಘ

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:ಕೇಂದ್ರ ಹಣಕಾಸು ಸಚಿವರ ಬಳಿ ಕನಸು ಬಿಚ್ಚಿಟ್ಟ ಅಕ್ಷರ ಸಂತ.. ತನ್ನೂರಿಗೆ ಪಿಯು ಕಾಲೇಜು ಬೇಕೆಂದ ಪದ್ಮಶ್ರೀ ಪುರಸ್ಕೃತ ಹಾಜಬ್ಬ

ಜೊತೆಗೆ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು. ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details