ಬೆಂಗಳೂರು: ಇಂದಿನಿಂದ ಪ್ರಾರಂಭವಾಗುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಶುಭ ಹಾರೈಸಿದ ಸಿಎಂ - ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದ್ದಾರೆ . ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು, ಬಿಜೆಪಿ ನಾಯಕರು ಕೂಡ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಎಸ್ಎಸ್ಎಲ್ಸಿ ಪರೀಕ್ಷೆ ಪ್ರತಿಯೊಬ್ಬರ ಜೀವನದಲ್ಲಿಯೂ ಬಹಳ ಪ್ರಮುಖ ಘಟ್ಟ. ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕೆನ್ನುವುದು ನಮ್ಮ ಆಶಯ ಎಂದು ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು, ಬಿಜೆಪಿ ನಾಯಕರು ಕೂಡ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ್ದಾರೆ.