ಕರ್ನಾಟಕ

karnataka

ETV Bharat / city

ಜನಪರ, ರೈತರಿಗೆ ವರದಾನವಾಗುವ ಬಜೆಟ್: ಸಿಎಂ ಮೆಚ್ಚುಗೆ

ಹಣಕಾಸು ಸಚಿವೆ ಹಾಗೂ ಪ್ರಧಾನಿಗೆ ರಾಜ್ಯದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಕೇಂದ್ರದ 2020 ಬಜೆಟ್​ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

cm-bs-yadiyurappa-reaction-on-2020-budget
ಸಿಎಂ ಯಡಿಯೂರಪ್ಪ

By

Published : Feb 1, 2020, 3:25 PM IST

ಬೆಂಗಳೂರು: ಕೇಂದ್ರ ಬಜೆಟ್ ಜನಪರ ಬಜೆಟ್ ಆಗಿದ್ದು, ರೈತರಿಗೆ ವರದಾನವಾಗಲಿದೆ ಎಂದು ಸಿಎಂ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಣಕಾಸು ಸಚಿವ ಹಾಗೂ ಪ್ರಧಾನಿಗೆ ರಾಜ್ಯದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಜನರ ಮೇಲೆ ಯಾವುದೇ ತೆರಿಗೆ ಭಾರ ಹಾಕದೆ ವಿನೂತನ ಬಜೆಟ್ ಮಂಡನೆ‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಈ ಬಜೆಟ್‌ನಲ್ಲಿ ರೈತರಿಗೆ, ಬಡವರಿಗೆ, ಗ್ರಾಮೀಣ ಜನರಿಗೆ ಸಾಕಷ್ಟು ಒತ್ತು ನೀಡಲಾಗಿದೆ. ರೈತರಿಗೆ ಈ ಬಜೆಟ್ ವರದಾನವಾಗಿದೆ ಎಂದು ತಿಳಿಸಿದರು.

ದೇಶದ ಜಿಡಿಪಿ ಪ್ರಗತಿಗೆ ಈ ಬಜೆಟ್ ನೆರವಾಗಲಿದೆ. ರೈತರ ಉತ್ಪನ್ನ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಕೃಷಿಗೆ ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

ಕೇಂದ್ರ ಬಜೆಟ್ ಜನಪರ, ರೈತರಿಗೆ ವರದಾನವಾಗುವ ಬಜೆಟ್

ಶಿಕ್ಷಣ ಕ್ಷೇತ್ರದಲ್ಲಿ ಎಫ್‌ಡಿಐಯಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ರಫ್ತಿಗೆ ಆದ್ಯತೆ ನೀಡಲಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಎಕ್ಸ್ ಪೋರ್ಟ್ ಹಬ್ ಸ್ಥಾಪನೆಯಿಂದ ಅನುಕೂಲವಾಗಲಿದೆ. ಮೂಲಭೂತ ಸೌಕರ್ಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉಪನಗರ ರೈಲು ಯೋಜನೆಗೆ 18,600 ಕೋಟಿ ರೂ. ಅನುಮೋದಿಸಿದ್ದಾರೆ. ಬೆಂಗಳೂರಿಗರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ. ಪಿಪಿಪಿ ಮಾದರಿಯಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details