ಬೆಂಗಳೂರು:ವೀರಶೈವ ಲಿಂಗಾಯತ ಸಮುದಾಯದವರು ಬಿಜೆಪಿಗೆ ಮತ ನೀಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿದ್ದ ದೂರನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.
ಸಿಎಂ ವಿರುದ್ಧ 'ಕೈ' ಕೊಟ್ಟ ದೂರು ಸ್ವೀಕರಿಸಿದ ಚುನಾವಣಾ ಆಯೋಗ - ಬಿ.ಎಸ್. ಯಡಿಯೂರಪ್ಪ ಮತದಾರರಿಗೆ ಆಮಿಷ
ವೀರಶೈವ ಲಿಂಗಾಯತ ಸಮುದಾಯದವರು ಬಿಜೆಪಿಗೆ ಮತ ನೀಡಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿದ್ದ ದೂರನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.
ಗೋಕಾಕ್ ಉಪ ಚುನಾವಣಾ ಪ್ರಚಾರ ಸಂದರ್ಭ ನ. 23ರಂದು ಸಿಎಂ “ವೀರಶೈವ ಮತ್ತು ಲಿಂಗಾಯತ ಸಮುದಾಯದವರು ಬೇರೆ ಪಕ್ಷಗಳಿಗೆ ಎಂದೂ ಮತ ಚಲಾಯಿಸಬೇಡಿ". ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ವೀರಶೈವ ಹಾಗೂ ಲಿಂಗಾಯತ ಸಮುದಾಯದವರು ನಮ್ಮ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಹೇಳಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ. ಈ ವಿಚಾರವಾಗಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇಂದು ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ನಿಯೋಗಕ್ಕೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕೇಸ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ವಿಜಯನಗರ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಮನೆಯ ಗೃಹ ಪ್ರವೇಶದ ವೇಳೆ ಬಂದವರಿಗೆ ದುಬಾರಿ ಗಿಫ್ಟ್ ಕೊಟ್ಟಿದ್ದಾರೆ. ಅಲ್ಲದೆ ಡಿ. 1ರಂದು ಮಗನ ಮದುವೆ ಇದ್ದು, 50 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಎಂಟಿಬಿ ನಾಗರಾಜ್ ಕೂಡ ಚಿನ್ನದ ರಿಂಗ್ ಗಿಫ್ಟ್ ಕೊಟ್ಟಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಅವರು ಕ್ರಮ ತೆಗೆದುಕೊಳ್ಳುವ ಭರವಸೆ ಕೊಟ್ಟಿದ್ದಾರೆ ಎಂದರು.