ಬೆಂಗಳೂರು: ನಾಡಹಬ್ಬ ದಸರಾ ಉತ್ಸವದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.
ನಾಳೆ ನಾಡಹಬ್ಬ ದಸರಾ ಉತ್ಸವಕ್ಕೆ ಚಾಲನೆ: ಮೈಸೂರಿಗೆ ತೆರಳಿದ ಸಿಎಂ - ಮೈಸೂರು ದಸರಾ ಕಾರ್ಯಕ್ರಮಗಳು
ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಇಂದು ಸಿಎಂ ಯಡಿಯೂರಪ್ಪನವರು ಮೈಸೂರಿಗೆ ತೆರಳಿದರು. ಈ ಸಂದರ್ಭದಲ್ಲಿ ಕೇಂದ್ರದ ಅನುದಾನ ಬಿಡುಗಡೆ ಕುರಿತು ಭರವಸೆ ನೀಡಿದರು.
ಸಂಜೆ 5.30 ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಪ್ರಯಾಣಿಸುತ್ತಿದ್ದು, ಸಂಜೆ 6.30 ಕ್ಕೆ ಮೈಸೂರು ತಲುಪಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಲಿದ್ದಾರೆ. ನಂತರ ನಾಡಹಬ್ಬ ದಸರಾ ಆಚರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಿಎಂ ಸಭೆ ನಡೆಸಲಿದ್ದಾರೆ.
ಹೆಚ್ಎಲ್ಎಲ್ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೇಂದ್ರದಿಂದ ಹಳೆ ಬಾಕಿ ಪರಿಹಾರ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಇಂದು ಕೂಡ ಕೇಂದ್ರ ಗೃಹ ಸಚಿವರ ಜೊತೆ ಮಾತನಾಡಿದ್ದೇನೆ. ಅವರು ಇಂದು ಹಾಗೂ ನಾಳೆ ಸಭೆ ಇದೆ ಎಂದು ತಿಳಿಸಿದ್ದು, ಹಣ ಬಿಡುಗಡೆ ಬಗ್ಗೆ ಭರವಸೆ ಕೊಟ್ಟಿದ್ದಾರೆ. ನೂರಕ್ಕೆ ನೂರರಷ್ಟು ಹಣ ಬಿಡುಗಡೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸ ಇದೆ ಎಂದರು.