ಕರ್ನಾಟಕ

karnataka

ETV Bharat / city

ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಬಿಎಸ್​ವೈ: ವಿಶೇಷ ಪೂಜೆ - CM BS Yediyurappa visited Radhakrishna temple

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ ಬಿಎಸ್​ವೈ
ಸಿಎಂ ಬಿಎಸ್​ವೈ

By

Published : Feb 27, 2021, 12:06 PM IST

Updated : Feb 27, 2021, 12:33 PM IST

ಬೆಂಗಳೂರು: ಹುಟ್ಟುಹಬ್ಬದ ಹಿನ್ನೆಲೆ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ಪ್ರತಿ ವರ್ಷ ಸಿಎಂ ಯಡಿಯೂರಪ್ಪ ಜನ್ಮ ದಿನದ ಪ್ರಯುಕ್ತ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.‌ ಇಂದೂ ಸಹ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪುಷ್ಪಾರ್ಚನೆ ಮತ್ತು ವಿದ್ಯಾ ಗಣಪತಿ ಪೂಜೆ ನೆರವೇರಿದರು. ಈ ವೇಳೆ ಸಿಎಂಗೆ ಸಚಿವ ಬೈರತಿ ಬಸವರಾಜ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ, ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳು ಆಗಲಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ. ಈ ಸಲ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇವೆ. ಉಳಿದ ಎರಡು ವರ್ಷದ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ, ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಬಾಳಲು ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನನ್ನ ಗುರಿ ಎಂದು ತಿಳಿಸಿದರು.

Last Updated : Feb 27, 2021, 12:33 PM IST

ABOUT THE AUTHOR

...view details