ಕರ್ನಾಟಕ

karnataka

ETV Bharat / city

ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನ: ಸಿಎಂ ಬಿಎಸ್​​ವೈ, ಮಾಜಿ ಸಿಎಂ ಹೆಚ್​​ಡಿಕೆ ಸಂತಾಪ - The journalist has died

ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

CM BSY condolences  death of journalist Nagaraj Dixit
ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನಕ್ಕೆ ಸಿಎಂ ಬಿಎಸ್​​ವೈ ಸಂತಾಪ

By

Published : Sep 18, 2020, 12:21 PM IST

Updated : Sep 18, 2020, 1:29 PM IST

ಬೆಂಗಳೂರು: ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದಿನಪತ್ರಿಕೆ‌ ಹಾಗೂ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರದ್ದು ಬಹುಮುಖ ಪ್ರತಿಭೆ. ತಮ್ಮ ಶ್ರಮದಿಂದಲೇ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಇವರ ನಿಧನದಿಂದ ಮಾಧ್ಯಮರಂಗ ಪ್ರತಿಭಾವಂತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.

ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಹೆಚ್​​​​ಡಿಕೆ ಸಂತಾಪ

ಹಿರಿಯ ಪತ್ರಕರ್ತ ನಾಗರಾಜ ದೀಕ್ಷಿತ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಹ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಹುಮುಖ ಪ್ರತಿಭೆಯ ಸರಳ ಸಜ್ಜನಿಕೆಯ ಪತ್ರಕರ್ತರಾಗಿದ್ದ ದೀಕ್ಷಿತ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Last Updated : Sep 18, 2020, 1:29 PM IST

ABOUT THE AUTHOR

...view details