ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ್ದು ರಾಜ್ಯದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾದರು.
ಪ್ರಧಾನಿ ಜೊತೆಗಿನ ವಿಡಿಯೊ ಸಂವಾದದಲ್ಲಿ ನೆರವಿನ ಅಪೇಕ್ಷೆ ವ್ಯಕ್ತಪಡಿಸಿದ ಸಿಎಂ ಬಿಎಸ್‌ವೈ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದು, ಕೊರೊನಾ, ಲಾಕ್‌ಡೌನ್ ಕುರಿತಾಗಿ ಸಲಹೆಗಳನ್ನು ಪಡೆದುಕೊಂಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ಪ್ರಧಾನಿ ಮೋದಿ ಸಂವಾದದಲ್ಲಿ ಪಾಲ್ಗೊಂಡ ಸಿಎಂ, ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಮಾಹಿತಿ ನೀಡಿದರು. ಲಾಕ್‌ಡೌನ್ ಸಡಿಲಿಕೆ ನಂತರದ ಬೆಳವಣಿಗೆಗಳ ಕುರಿತು ವಿವರ ನೀಡಿದ ಬಿಎಸ್‌ವೈ, ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ 1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಕುರಿತು ಪ್ರಸ್ತಾಪಿಸಿ ಕೇಂದ್ರದ ನೆರವಿಗೆ ಅಪೇಕ್ಷೆ ವ್ಯಕ್ತಪಡಿಸಿದರು.
ಈ ವೇಳೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್ಥ ನಾರಾಯಣ್, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪಾಲ್ಗೊಂಡಿದ್ದರು.