ಕರ್ನಾಟಕ

karnataka

ETV Bharat / city

ಡಿಕೆಶಿ ಬಂಧನ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಎಂ ಬಿಎಸ್​ವೈ ನಿರಾಕರಣೆ - ಸಿಎಂ ಯಡಿಯೂರಪ್ಪ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ‌ ಖಂಡಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡದೆ ಸಿಎಂ ಬಿಎಸ್​ವೈ ತೆರಳಿದರು.

ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡದೆ ತೆರಳಿದ ಸಿಎಂ ಬಿಎಸ್​ವೈ

By

Published : Sep 4, 2019, 10:25 AM IST

ಬೆಂಗಳೂರು: ಡಿ.ಕೆ.ಶಿವಕುಮಾರ್ ಬಂಧನ‌ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವುದರ ಸಂಬಂಧ ಮಾಧ್ಯಮದವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಿಎಂ ಯಡಿಯೂರಪ್ಪ ತೆರಳಿದರು.

ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡದೆ ತೆರಳಿದ ಸಿಎಂ ಬಿಎಸ್​ವೈ

ಡಾಲರ್ಸ್ ಕಾಲೋನಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಿಎಸ್​ವೈ, ಇತ್ತ ಇಂದು ಕೆಂಪೇಗೌಡ ಜಯಂತಿ ಹಿನ್ನೆಲೆ ಮೇಕ್ರಿ ಸರ್ಕಲ್​ನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಆಚರಣೆಗೆ ಹೋಗುತ್ತಿದ್ದೇನೆ. ಮಹಾನ್ ವ್ಯಕ್ತಿಯ ನೆನಪು ಮಾಡಿಕೊಳ್ಳುವ ದಿನ ಇದು. ಸಂಜೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡುತ್ತೇನೆ ಎಂದರು.

ಇನ್ನು ಇದೇ ವೇಳೆ ಡಿ.ಕೆ.ಶಿವಕುಮಾರ್ ಬಂಧನ‌ ಖಂಡಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡದೆ ಸಿಎಂ ತೆರಳಿದರು.

ABOUT THE AUTHOR

...view details