ಬೆಂಗಳೂರು: ನಗರದಲ್ಲಿ ನಡೆದಿರುವ ಗಲಭೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಂಡಿಸಿದ್ದು, ಘಟನೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಟ್ವೀಟ್ ಮೂಲಕ ರಾಜ್ಯದ ಜನರಿಗೆ ಭರವಸೆ ನೀಡಿದ್ದಾರೆ.
ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ ಬಿಎಸ್ವೈ ಭರವಸೆ - CM on Bangalore violence case
ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೇ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.
ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ ಹಾಗೂ ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಬಿಎಸ್ವೈ ಟ್ವೀಟ್ ಮಾಡಿದ್ದಾರೆ.
ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೇ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.