ಕರ್ನಾಟಕ

karnataka

ETV Bharat / city

ತನ್ವೀರ್ ಸೇಠ್ ಮೇಲಿನ ಹಲ್ಲೆಗೆ ಸಿದ್ದರಾಮಯ್ಯ ಪರೋಕ್ಷ ಕಾರಣ: ಬಿಎಸ್​ವೈ - ಸಿದ್ದರಾಮಯ್ಯ ವಿರುದ್ಧ ಬಿಎಸ್​ವೈ ವಾಗ್ದಾಳಿ

ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಯಾಗಲು ಸಿದ್ದರಾಮಯ್ಯನವರೇ ಪರೋಕ್ಷ ಕಾರಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಿಎಂ ಬಿಎಸ್​ವೈ ಆರೋಪ

By

Published : Nov 19, 2019, 1:41 PM IST

ಬೆಂಗಳೂರು:ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಯಾಗಲು ಸಿದ್ದರಾಮಯ್ಯನವರೇ ಪರೋಕ್ಷ ಕಾರಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ ವಿರುದ್ಧ ಇದ್ದ ಎಲ್ಲಾ ಕೇಸ್​ಗಳನ್ನು ವಾಪಸ್ ಪಡೆದಿದ್ದರು. ಇದರಿಂದಾಗಿ ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗಲಭೆಯಾಗಿ ಒಂದು ಕೊಲೆ ಪ್ರಕರಣ ನಡೆದಿತ್ತು. ಈ ಮೂಲಕ ಕೊಲೆ ಹಾಗೂ ಗುಂಡಾಗಿರಿ ಮಾಡಿದವರ ಕೇಸುಗಳನ್ನು ವಾಪಸ್ ಪಡೆದು, ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಗೆ ಪರೋಕ್ಷ ಬೆಂಬಲ ಕೊಟ್ಟಿದ್ದಾರೆಂದು ಆರೋಪಿಸಿದರು. ಇದರ ಬಗ್ಗೆ ನಾಡಿನ ಜನತೆಗೆ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ವಿರುದ್ಧ ಸಿಎಂ ಬಿಎಸ್​ವೈ ಆರೋಪ

ಸಿದ್ದರಾಮಯ್ಯ ಹೋದ ಕಡೆಯಲ್ಲಾ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಸಲ್ಲದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದಕ್ಕೆ ಮತದಾರರು ಸರಿಯಾದ ಉತ್ತರ ಕೊಡುತ್ತಾರೆ ಎಂದು ತಿರುಗೇಟು ನೀಡಿದರು.

ABOUT THE AUTHOR

...view details