ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿ ನೆಗೆಟಿವ್ ಬಂದಿದೆ.
ಸತತ ಮೂರನೇ ಬಾರಿ ಯಡಿಯೂರಪ್ಪ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಸಿಎಂ ನಿರಾಳರಾಗಿದ್ದು, ಅಧಿಕಾರಿಗಳು ಸಹ ನಿಟ್ಟುಸಿರು ಬಿಟ್ಟಿದ್ದಾರೆ. ಸಿಎಂ ನಿವಾಸದಲ್ಲಿ ಮತ್ತು ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆ ಸಿಎಂ ಸೆಲ್ಫ್ ಕ್ವಾರೆಂಟೈನ್ ಆಗಿದ್ದರು. ತಮ್ಮ ಕಾವೇರಿ ನಿವಾಸದಲ್ಲೇ ಇದ್ದು ಸಭೆಗಳನ್ನು ನಡೆಸುತ್ತಿದ್ದರು.