ಬೆಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕಾಡುಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಬಿಎಸ್‌ವೈ ಭೇಟಿ, ವಿಶೇಷ ಪೂಜೆ - CM BSY visits Kadu malleshwar temple
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕಾಡುಮಲ್ಲೇಶ್ವರ ದೇವಾಲಯಕ್ಕೆ ಸಿಎಂ ಭೇಟಿ
ಶಿವಭಕ್ತರಾಗಿರುವ ಸಿಎಂ ಹಬ್ಬದ ಪ್ರಯುಕ್ತ ಕಾಡುಮಲ್ಲೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಜೆಟ್ ಮಂಡನೆ, ಅಧಿವೇಶನದಲ್ಲಿ ಬಿಡುವಿಲ್ಲದಂತೆ ತೊಡಗಿಕೊಂಡಿದ್ದ ಸಿಎಂ ಇಂದು ಇಡೀ ದಿನ ನಿವಾಸದಲ್ಲೇ ಇದ್ದು ವಿಶ್ರಾಂತಿ ಪಡೆದರು.
ಬೆಳಗ್ಗೆಯಿಂದ ಸಂಜೆವರೆಗೂ ವಿರಮಿಸಿದ ಸಿಎಂ ರಾತ್ರಿ ಕಾಡುಮಲ್ಲೇಶ್ವರನ ದರ್ಶನ ಪಡೆದರು.