ಬೆಂಗಳೂರು: ಅಯೋಧ್ಯೆಗೆ ಭೇಟಿ ನೀಡುವ ಕರ್ನಾಟಕದ ಯಾತ್ರಾರ್ಥಿಗಳಿಗೆ ತಂಗಲು ಪೂರಕವಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಲು ರಾಜ್ಯ ಸರ್ಕಾರಕ್ಕೆ ಅಯೋಧ್ಯೆಯಲ್ಲಿ ಎರಡು ಎಕರೆ ಭೂಮಿ ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಅಯೋಧ್ಯೆಯಲ್ಲಿ 2 ಎಕರೆ ಜಮೀನು ಕೇಳಿ ಯುಪಿ ಸಿಎಂಗೆ ಬಿಎಸ್ವೈ ಪತ್ರ! - ಯೋಗಿ ಆದಿತ್ಯನಾಥ್ಗೆ ಸಿಎಂ ಬಿಎಸ್ವೈ ಪತ್ರ
ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಲು 2 ಎಕರೆ ಜಮೀನು ನೀಡುವಂತೆ ಉತ್ತರ ಪ್ರದೇಶ ಸಿಎಂಗೆ ಸಿಎಂ ಬಿಎಸ್ವೈ ಮನವಿ ಮಾಡಿದ್ದಾರೆ.
ಸಿಎಂ ಬಿಎಸ್ವೈ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ ದೊಡ್ಡ ಸಂಖ್ಯೆಯಲ್ಲಿ ಕರ್ನಾಟಕದ ಯಾತ್ರಾರ್ಥಿಗಳು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಾಗಾಗಿ ರಾಜ್ಯದ ಯಾತ್ರಿಗಳಿಗಾಗಿ ಕರ್ನಾಟಕ ಸರ್ಕಾರ ಅಯೋಧ್ಯೆಯಲ್ಲಿ ಯಾತ್ರಿನಿವಾಸ ನಿರ್ಮಾಣ ಮಾಡಲು ಚಿಂತನೆ ನಡೆಸಿದೆ. ಅಂತೆಯೇ ತಾವು ಎರಡು ಎಕರೆ ಭೂಮಿಯನ್ನು ಅಯೋಧ್ಯೆಯಲ್ಲಿ ನೀಡುವಂತೆ ಪತ್ರದ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.