ಕರ್ನಾಟಕ

karnataka

ETV Bharat / city

ವಿವಾದಕ್ಕೆ ಎಡೆಮಾಡಿದ ಸಿಎಂ ಫ್ಲೆಕ್ಸ್ ವಿಚಾರ: ತೆರವುಗೊಳಿಸಿ ಕೇಸ್​ ದಾಖಲಿಸಿದ ಬಿಬಿಎಂಪಿ - ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್

ಬೆಂಗಳೂರಿನಲ್ಲಿ ಫ್ಲೆಕ್ಸ್​, ಬ್ಯಾನರ್​ ನಿಷೇಧಗೊಳಿಸಿದ್ದರೂ ಬಿಬಿಎಂಪಿಯ ಕೇಂದ್ರ ಕಚೇರಿಯ ಆವರಣ, ಮೇಯೊಹಾಲ್ ಸೇರಿದಂತೆ ನಗರದ ವಿವಿಧೆಡೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಫೋಟೋ ಇರುವ ಫ್ಲೆಕ್ಸ್​ಗಳನ್ನು ಹಾಕಿದ್ದು ವಿವಾದಕ್ಕೆ ಕಾರಣವಾಗಿದೆ.

ವಿವಾದಕ್ಕೆ ಎಡೆಮಾಡಿದ ಸಿಎಂ ಫ್ಲೆಕ್ಸ್ ವಿಚಾರ

By

Published : Oct 30, 2019, 11:36 PM IST

ಬೆಂಗಳೂರು:ಬಿಬಿಎಂಪಿಯ ಕೇಂದ್ರ ಕಚೇರಿಯ ಆವರಣ, ಮೇಯೊಹಾಲ್ ಸೇರಿದಂತೆ ನಗರದ ವಿವಿಧೆಡೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಫೋಟೋ ಇರುವ ಫ್ಲೆಕ್ಸ್​ಗಳನ್ನು ಹಾಕಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬಿಬಿಎಂಪಿ ಫ್ಲೆಕ್ಸ್​ಗಳನ್ನು ತೆರವುಗೊಳಿಸಿದೆ.

ವಿವಾದಕ್ಕೆ ಎಡೆಮಾಡಿದ ಸಿಎಂ ಫ್ಲೆಕ್ಸ್ ವಿಚಾರ

ಬೆಂಗಳೂರು ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧವಾಗಿದೆ. ಪಾಲಿಕೆ ಈ ಬಗ್ಗೆ ಜಾಹಿರಾತು ಬೈಲಾವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೂ ರಾಜ್ಯ ಸರ್ಕಾರದ ಕಾರ್ಯಕ್ರಮದ ಫ್ಲೆಕ್ಸ್​ಗಳನ್ನು ನಗರದ ವಿವಿಧೆಡೆ ಹಾಕಿರುವುದು ವಿವಾದವಾಗಿದೆ. ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡ ಬಿಬಿಎಂಪಿ ಅಧಿಕಾರಿಗಳು ಫ್ಲೆಕ್ಸ್​ ತೆರವುಗೊಳಿಸಿದ್ದಾರೆ.

ನಗರದ ವಿವಿಧೆಡೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ತುರ್ತು ಸ್ಪಂದನ ಸಹಾಯ ವ್ಯವಸ್ಥೆಯ ಉದ್ಘಾಟನಾ ಸಮಾರಂಭದ ಫ್ಲೆಕ್ಸ್ ಗಳನ್ನು ಅಳವಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಫ್ಲೆಕ್ಸ್ ಅಳವಡಿಸಿದವರ ಮೇಲೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ವಿವರಣೆ ನೀಡುವಂತೆಯೂ ತಿಳಿಸಲಾಗಿದೆ. ಯಾರೇ ಫ್ಲೆಕ್ಸ್ ಅಳವಡಿಸಿದರೂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈ ಬಗ್ಗೆ ಸಾಮಾಜಿಕ ಹೋರಾಟಗಾರ ಸಾಯಿದತ್ತಾ ಕೂಡಾ ಪೊಲೀಸ್ ಕಮಿಷನರ್ ಹಾಗೂ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಫ್ಲೆಕ್ಸ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ABOUT THE AUTHOR

...view details