ಕರ್ನಾಟಕ

karnataka

ETV Bharat / city

ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ - CM Video Conversation with District Officers

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿಂದು ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಐದು ನಿಮಿಷಗಳಲ್ಲೇ ಮುಗಿಸಿದ್ದಾರೆ.

ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ!

By

Published : Oct 23, 2019, 2:58 PM IST

ಬೆಂಗಳೂರು:ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿಂದು ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇವಲ ಐದು ನಿಮಿಷಗಳಲ್ಲೇ ಮುಗಿಸಿದ್ದಾರೆ.

ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ ವಿಡಿಯೋ ಸಂವಾದ ಏರ್ಪಡಿಸಲಾಗಿತ್ತು. ಸಮಿತಿ ಕೊಠಡಿಗೆ ಆಗಮಿಸಿದ್ದ ಸಿಎಂ, ಪ್ರವಾಹ ಪರಿಸ್ಥಿತಿಯನ್ನು ಸಮಗ್ರವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ, ಐದೇ ನಿಮಿಷದಲ್ಲಿ ಸಂವಾದ ಮುಗಿಸಿದರು.

ನಂತರ ಸಭೆಯನ್ನು ಮುಂದುವರಿಸುವಂತೆ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿ, ವಿಧಾನಸೌಧದಿಂದ ಆತುರವಾಗಿಯೇ ತಮ್ಮ ಪಕ್ಷದ ಕಚೇರಿಗೆ ತೆರಳಿದರು.

ABOUT THE AUTHOR

...view details