ಕರ್ನಾಟಕ

karnataka

ETV Bharat / city

₹11,513 ಕೋಟಿ ಬಂಡವಾಳ ಹೂಡಿಕೆ, 46 ಸಾವಿರ ಉದ್ಯೋಗ ಸೃಷ್ಠಿ: ಸಿಎಂ ನೇತೃತ್ವದ ಸಭೆ ಅಸ್ತು - ಕರ್ನಾಟಕ ಸಚಿವ ಸಂಪುಟ ಸಭೆ

ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಂಪುಟ ಸಭೆಯಲ್ಲಿ 10 ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಸಿಎಂ ಬೊಮ್ಮಾಯಿ
ಸಭೆಯಲ್ಲಿ ಸಿಎಂ ಬೊಮ್ಮಾಯಿ

By

Published : Apr 18, 2022, 8:05 PM IST

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ 11,513 ಕೋಟಿ ರೂ. ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ 10 ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 46,984 ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದೆ.

ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು. ಕೈಗಾರಿಕೆಗಳಿಗೆ ನೀಡಲಾಗಿರುವ ಜಮೀನು ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ವಿದ್ಯುತ್ ಹಾಗೂ ಸ್ಟೀಲ್ ಯೋಜನೆಗಳಿಗೆ ಸಂಬಂಧಿಸಿದ ಕೈಗಾರಿಕೆಗಳಲ್ಲಿ ನೀರಿನ ಬಳಕೆಯ ಪ್ರಮಾಣ ಹೆಚ್ಚಿರುತ್ತದೆ. ಕೈಗಾರಿಕೆಗಳಲ್ಲಿ ನೀರಿನ ಬಳಕೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.


10-20 ವರ್ಷಗಳ ಹಿಂದೆ ಸ್ಥಳ ಮಂಜೂರಾತಿ ಮಾಡಿಸಿಕೊಂಡಿದ್ದರೂ ಯೋಜನೆಗೆ ಬಳಕೆಯಾಗದೆ ಉಳಿದುಕೊಂಡಿರುವ ಕೈಗಾರಿಕೆಗಳಿವೆ. ಇದನ್ನು ಬೇರೆಯವರಿಗೆ ಕೊಡಲೂ ಸಾಧ್ಯವಿಲ್ಲದ ಸ್ಥಿತಿ ಇದೆ. ಈ ಬಗ್ಗೆ ಕೂಡಲೇ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪರಿಶೀಲನೆಗಾಗಿ ಪ್ರತ್ಯೇಕವಾಗಿ ಸಭೆ ಕರೆಯುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನವೆಂಬರ್ 2 ಮತ್ತು 3 ರಂದು ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಈ ಯೋಜನೆಗಳು ಪೂರಕವಾಗಲಿವೆ. ಭೂಮಿ ನೀರು, ವಿದ್ಯುತ್ ಮೂಲಭೂತ ಸೌಕರ್ಯ, ವಿನಾಯತಿ ನೀಡುವುದು, ಹೊಸ ಕೈಗಾರಿಕಾ ನೀತಿ 2025 ರ ಅಡಿಯಲ್ಲಿ ಯಾವ ರೀತಿ ಸೌಲಭ್ಯಗಳನ್ನು ನೀಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಸತಿ ಸಚಿವ ವಿ.ಸೋಮಣ್ಣ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಐ.ಟಿ. ಬಿ.ಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯಾವೆಲ್ಲಾ ಪ್ರಸ್ತಾವನೆಗಳಿಗೆ ಅಸ್ತು?:

  • ಎಕ್ಸೈಡ್ ಎನರ್ಜಿ ಸೊಲುಷ್ಯನ್ ಲಿ.ನಿಂದ ಬೆಂಗಳೂರು ಗ್ರಾಮಾಂತರದಲ್ಲಿ 6002 ಕೋಟಿ ರೂ. ಮೌಲ್ಯದ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ. 1400 ಉದ್ಯೋಗ ಸೃಜನೆ ನಿರೀಕ್ಷೆ.
  • ಎನ್ ಶ್ಯುವರ್ ರಿಲಯಬಲ್ ಸೊಲುಷ್ಯನ್ ಲಿ.ನಿಂದ ಕೋಲಾರದ ಮಾಲೂರಿನಲ್ಲಿ 1050 ಕೋಟಿ ರೂ.‌ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. 450 ಉದ್ಯೋಗ ಸೃಜನೆಯ‌ ನಿರೀಕ್ಷೆ.
  • ಜೆಎಸ್ ಡಬ್ಲ್ಯು ರಿನಿವೇಬಲ್ ಎನರ್ಜಿ ಲಿ.ನಿಂದ ಬಳ್ಳಾರಿಯ ವಿದ್ಯಾನಗರದಲ್ಲಿ 679.51 ಕೋಟಿ ರೂ. ಹೂಡಿಕೆ ಪ್ರಸ್ತವಾನೆಗೆ ಅಸ್ತು. 65 ಉದ್ಯೋಗ ಸೃಷ್ಟಿ ನಿರೀಕ್ಷೆ.
  • ವೆಬ್ ವರ್ಕ್ ಇಂಡಿಯಾ ಲಿ.ನಿಂದ ಬೆಂಗಳೂರಿನ ಕೆ.ಆರ್.ಪುರಂನಲ್ಲಿ 530 ಕೋಟಿ ರೂ. ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ. 69 ಉದ್ಯೋಗ ಸೃಜನೆ ನಿರೀಕ್ಷೆ.
  • ಟೆಟ್ರಾಕ್ ಟೆವಲಪರ್ಸ್ ಲಿ. ನಿಂದ ದೇವನಹಳ್ಳಿ ಬಳಿ 2231 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅಸ್ತು. 45,000 ಉದ್ಯೋಗ ಸೃಜನೆಯ ನಿರೀಕ್ಷೆ.
  • ಎಸಿಸಿ ಲಿ.ನಿಂದ ಕಲಬುರಗಿಯ ಚಿತ್ತಾಪುರದಲ್ಲಿ 471 ಕೋಟಿ ರೂ. ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗೆ ಅಸ್ತು.
  • ಗೂಡ್ರಿಚ್ ಎರೋಸ್ಪೇಸ್ ಸರ್ವಿಸ್ ಲಿ.ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 280 ಕೋಟಿ ರೂ. ಹೆಚ್ಚುವರಿ ಬಂಡವಾಳ ಹೂಡಿಕೆಯ ಪ್ರಸ್ತವಾನೆಗೆ ಅಸ್ತು.
  • ಜೆ.ಕೆ.ಸಿಮೆಂಟ್ ವರ್ಕ್ಸ್ ಲಿ.ನಿಂದ ಬಾಗಲಕೋಟೆಯ ಮುಧೋಳ್‌ನಲ್ಲಿ 242.89 ಕೋಟಿ ರೂ. ಹೆಚ್ಚುವರಿ ಹೂಡಿಕೆಯ ಪ್ರಸ್ತಾವನೆಗೆ ಅಸ್ತು
  • ಸಿ.ವಿ.ಪ್ರೊಜೆಕ್ಟ್ ಲಿ.ನಿಂದ ಯಲಹಂಕದ ಅಮೃತಹಳ್ಳಿಯಲ್ಲಿ 9 ಕೋಟಿ ರೂ. ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ.

ABOUT THE AUTHOR

...view details