ಬೆಂಗಳೂರು: ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಹೆಚ್ಚಿನ ನೆರವು ಬೇಕಾದಲ್ಲಿ ಕೂಡಲೇ ತಿಳಿಸುವಂತೆ ನಿರ್ದೇಶನ ನೀಡಿದ್ದಾರೆ.
ನದಿಪಾತ್ರದ ಹಳ್ಳಿಗಳ ಮೇಲೆ ನಿಗಾ ಇರಿಸಲು ಬೆಳಗಾವಿ ಡಿಸಿಗೆ ಸಿಎಂ ಸೂಚನೆ - Belgavi Rain news
ಪ್ರವಾಹ ಪೀಡಿತ ಪ್ರದೇಶದ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸುತ್ತಿದ್ದಾರೆ. ಇನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದ ಇತರೆ ಜಿಲ್ಲಾಧಿಕಾರಿಗಳ ಜೊತೆಯಲ್ಲಿಯೂ ಮುಖ್ಯಮಂತ್ರಿ ಮಾಹಿತಿ ಪಡೆದಿದ್ದಾರೆ. ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಅಲ್ಲಿನ ಸ್ಥಿತಿಗತಿಗಳು ಹಾಗೂ ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾಡಳಿತದ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.
ಕೆಲ ದಿನಗಳ ಹಿಂದೆ 12 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದ ಸಿಎಂ ಯಡಿಯೂರಪ್ಪ, ನೆರೆ ಹಾನಿ ಸುರಕ್ಷತೆ ಕುರಿತು ಮಾತುಕತೆ ನಡೆಸಿದ್ದರು. ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕಾರ್ಯಾಚರಣೆಗೆ ಸೂಚಿಸಿದ್ದರು. ಅದರಂತೆ ಏನೆಲ್ಲ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಡಳಿತದಿಂದ ಸಿಎಂ ಇದೀಗ ಮಾಹಿತಿ ಪಡೆಯುತ್ತಿದ್ದಾರೆ.