ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿ ಕ್ವಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಘಟನೆ ಕುರಿತು ಪರಿಶೀಲನೆ ನಡೆಸುವಂತೆ ನೂತನ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಸಿಎಂ ನಿರ್ದೇಶನದಂತೆ ನಿರಾಣಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾರೆ.
ಶಿವಮೊಗ್ಗಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಸಚಿವ ನಿರಾಣಿಗೆ ಸಿಎಂ ಸೂಚನೆ - Shivamogga CM Visit News
ಶಿವಮೊಗ್ಗದ ಹುಣಸೋಡು ಬಳಿ ಕ್ವಾರಿಯಲ್ಲಿ ಸಂಭವಿಸಿದ ಭಾರಿ ಅನಾಹುತದ ಕುರಿತು ಪರಿಶೀಲನೆ ನಡೆಸುವಂತೆ ನೂತನ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಸಿಎಂ ನಿರ್ದೇಶನದಂತೆ ನಿರಾಣಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ನಿರಾಣಿ, ಘಟನೆಯ ಸಂತ್ರಸ್ತ ಕುಟುಂಬಗಳಿಗೆ ಯಾವ ರೀತಿ ಪರಿಹಾರ ನೀಡಬೇಕು ಎಂದು ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಮೊದಲು ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತದೆ. ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಸ್ಥಳಕ್ಕೆ ಭೇಟಿ ನೀಡಿದ ನಂತರ ಮುಂದಿನ ನಿರ್ಧಾರಗಳನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ತವರು ಜಿಲ್ಲೆಯಲ್ಲಿ ನಡೆದ ಭಾರಿ ಸ್ಟೋಟ ಘಟನೆಯಿಂದ ಹೈಅಲರ್ಟ್ ಆಗಿರುವ ಸಿಎಂ ತಕ್ಷಣ ಶಿವಮೊಗ್ಗಕ್ಕೆ ಸಚಿವ ನಿರಾಣಿ ಅವರನ್ನು ಕಳುಹಿಸಿದ್ದು, ಸಾಧ್ಯವಾದಲ್ಲಿ ಇಂದು ಸಂಜೆ ಇಲ್ಲವೇ ನಾಳೆ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.