ಬೆಂಗಳೂರು :ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ವೈಯಕ್ತಿಕವಾಗಿ ಆಘಾತವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಸಚಿವ ಶಿವಳ್ಳಿ ನಿಧನ ಆಘಾತ ತಂದಿದೆ: ಸಿಎಂ ಹೆಚ್ಡಿಕೆ ಸಂತಾಪ - ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದರು.
ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಶಿವಳ್ಳಿ ಅವರೇ ಉಪಸ್ಥಿತರಿದ್ದು, ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ಶಿವಳ್ಳಿ ಇನ್ನಿಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ನಿನ್ನೆಯಷ್ಟೇ ನಾನು ಅವರನ್ನು ಭೇಟಿಯಾಗಿ ರಕ್ಷಣಾ ಕಾರ್ಯಾಚರಣೆ ಕುರಿತು ಚರ್ಚಿಸಿದ್ದೆ ಎಂದು ಸಿಎಂ ಹೇಳಿದರು.
ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಿವಳ್ಳಿ ಅವರು, ಜನಾನುರಾಗಿಗಳಾಗಿದ್ದರು. ಸಮಾಜಮುಖಿ ಕೆಲಸಗಳೇ ಅವರಿಗೆ ಹೆಸರು ತಂದಿದ್ದವು. ಭಗವಂತ ಅವರ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಸಂತಾಪ ಸೂಚಿಸಿದರು.