ಕರ್ನಾಟಕ

karnataka

ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಕ್ರಮಕ್ಕೆ ಕೇಂದ್ರದ ಮೆಚ್ಚುಗೆ: ಅಧಿಕಾರಿಗಳ ಜೊತೆ ಸಿಎಂ ಸಭೆ

By

Published : May 27, 2020, 4:47 PM IST

ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಹಿನ್ನೆಲೆ ಕೇಂದ್ರಕ್ಕೆ ಮಾಹಿತಿ ಕಳಿಸಿಕೊಡಲು, ಲಾಕ್​​ಡೌನ್ ಬಳಿಕ ವಿನಾಯಿತಿ ಬಗ್ಗೆ ಡ್ರಾಫ್ಟ್ ರೆಡಿ ಮಾಡಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

CM meeting with Corona Control Liaison Officers
ರಾಜ್ಯದ ಕೋವಿಡ್-19 ನಿಯಂತ್ರಣ ಕ್ರಮಕ್ಕೆ ಕೇಂದ್ರ ಮೆಚ್ಚುಗೆ, ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿ, ಕೊರೊನಾ ನಿಯಂತ್ರಣ ರಾಜ್ಯದಲ್ಲಿ ಯಾವ ಹಂತದಲ್ಲಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಬೆಂಗಳೂರು ನಗರ ಹಾಗೂ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿನ್ನೆಲೆ ಕೇಂದ್ರಕ್ಕೆ ಮಾಹಿತಿ ಕಳಿಸಿಕೊಡಲು ಲಾಕ್​​ಡೌನ್ ಬಳಿಕ ವಿನಾಯಿತಿ ಬಗ್ಗೆ ಡ್ರಾಫ್ಟ್ ರೆಡಿ ಮಾಡಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ರಾಜ್ಯದ ಮಾರ್ಗಸೂಚಿ ಬಗ್ಗೆ ಡ್ರಾಫ್ಟ್ ರೆಡಿ ಮಾಡುವಂತೆ ಸೂಚನೆ ನೀಡಿರುವ ಸಿಎಂ, ಆದಷ್ಟು ತ್ವರಿತವಾಗಿ ಅದನ್ನ ತಮಗೆ ಸಲ್ಲಿಸುವಂತೆ ತಿಳಿಸಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಸುಧಾರಣೆ ಬಗ್ಗೆ ಇರೋ ಮಾರ್ಗಪಾಯಗಳ ಬಗ್ಗೆ ಕೂಡ ಸಿಎಂ ಅಧಿಕಾರಿಗಳೊಂದಿಗೆ ಪರಾಮರ್ಶಿಸಿದ್ದಾರೆ. ಲಾಕ್​ಡೌನ್ ವಿನಾಯತಿ ಕೊಡುವುದರಿಂದ ಆರ್ಥಿಕ ಸಂಕಷ್ಟ ಪರಾಗುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಜನರಿಗೆ ಮುಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮಳೆಗಾಲ ಆರಂಭವಾಗುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನ ತೆಗೆದುಕೊಳ್ಳುವಂತೆ ಸಭೆಯಲ್ಲಿ ಸಿಎಂ ಸೂಚನೆ ಕೊಟ್ಟಿದ್ದಾರೆ. ಮಳೆಗಾಲ ಆರಂಭದಲ್ಲಿ ಉಂಟಾಗುವ ಸಮಸ್ಯೆಗಳು, ಹರಡುವ ರೋಗಗಳ ಬಗ್ಗೆಯೂ ಎಚ್ಚರಿಕೆ ವಹಿಸುವಂತೆ ಮಾರ್ಗದರ್ಶನ ನೀಡಿದ್ದಾರೆ.

ABOUT THE AUTHOR

...view details