ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾನಿ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಿಸಿದ್ದ ವಿಡಿಯೋ ಸಂವಾದ ರದ್ದಾಗಿದೆ.
ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಲು ಆಗಮಿಸಿದ್ದರು.