ಕರ್ನಾಟಕ

karnataka

ETV Bharat / city

ಸಂಪುಟ ವಿಸ್ತರಣೆ: ಅರುಣ್ ಸಿಂಗ್‌ರತ್ತ ಬೆರಳು ಮಾಡಿದ ಸಿಎಂ ಬಿಎಸ್ವೈ...! - ಮುಖ್ಯಮಂತ್ರಿ ಯಡಿಯೂರಪ್ಪ

ನಾಳೆ ಶಿವಮೊಗ್ಗದಲ್ಲಿ ಬಿಜೆಪಿ ವಿಶೇಷ ಸಭೆ ನಡೆಯಲಿದ್ದು, ಸಭೆಯಲ್ಲಿ ಭಾಗಿಯಾಗಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ. ಅವರೊಂದಿಗೆ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಾಗುತ್ತದೆ. ಅವರು ತರುವ ಸಂದೇಶದ ಮೇಲೆ ಎಲ್ಲವೂ ನಿರ್ಧಾರ ಆಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Cm reaction  about cabinet expention
ಮುಖ್ಯಮಂತ್ರಿ ಯಡಿಯೂರಪ್ಪ

By

Published : Jan 1, 2021, 12:54 PM IST

ಬೆಂಗಳೂರು: ಸಚಿವಾಕಾಂಕ್ಷಿಗಳಿಗೆ ಹೊಸ ವರ್ಷದ ಆರಂಭದಲ್ಲಿ ಶುಭಸುದ್ದಿ ಸಿಗಲಿದೆಯಾ ಎನ್ನುವ ಕುತೂಹಲಕ್ಕೆ ಇನ್ನೂ ತೆರೆಬಿದ್ದಿಲ್ಲ. ರಾಜ್ಯ ಉಸ್ತುವಾರಿ ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಬೆರಳು ತೋರಿದ್ದು, ಸಚಿವಾಕಾಂಕ್ಷಿಗಳ ಚಿತ್ತ ಅರುಣ್ ಸಿಂಗ್​ರತ್ತ ನೆಟ್ಟಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಏನು ಸುದ್ದಿ ತರುತ್ತಾರೆಯೋ ಕಾದು ನೋಡೋಣ. ನಾಳೆ ಶಿವಮೊಗ್ಗದಲ್ಲಿ ಬಿಜೆಪಿ ವಿಶೇಷ ಸಭೆ ನಡೆಯಲಿದ್ದು, ಸಭೆಯಲ್ಲಿ ಭಾಗಿಯಾಗಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ. ಅವರೊಂದಿಗೆ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಾಗುತ್ತದೆ. ವರಿಷ್ಠರ ಅಭಿಪ್ರಾಯ ಏನು ಎನ್ನುವ ಕುರಿತು ಅವರಿಂದ ಮಾಹಿತಿ ಪಡೆಯಲಾಗುತ್ತದೆ. ಅವರು ತರುವ ಸಂದೇಶದ ಮೇಲೆ ಎಲ್ಲವೂ ನಿರ್ಧಾರ ಆಗಲಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಈ ಹೇಳಿಕೆಯಿಂದಾಗಿ ಸಚಿವಾಕಾಂಕ್ಷಿಗಳ ಚಿತ್ತ ಇದೀಗ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ರತ್ತ ನೆಟ್ಟಿದೆ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅರುಣ್ ಸಿಂಗ್​ರ ರಾಜ್ಯ ಭೇಟಿ ಮಹತ್ವ ಪಡೆದುಕೊಂಡಿದೆ.

ABOUT THE AUTHOR

...view details