ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದೆಲ್ಲೆಡೆ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡು ಸಿಎಂ ಮಾಹಿತಿ ಪಡೆದುಕೊಂಡರು.
'ಪೌರತ್ವ' ಪ್ರತಿಭಟನೆ: ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ - ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ಸುದ್ದಿ
ರಾಜ್ಯದೆಲ್ಲೆಡೆ ಪೌರತ್ವ ಕಿಚ್ಚು ಹೆಚ್ಚುತ್ತಿದ್ದು, ಈ ಸಂಬಂಧ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡರು.
ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ
ರಾಜ್ಯದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ, ಡಿಜಿಪಿ ನೀಲಮಣಿ ರಾಜುರಿಂದ ದೂರವಾಣಿಯಲ್ಲಿ ಮಾಹಿತಿ ಪಡೆದಿದ್ದಾರೆ.
ಸಿಎಂ ಸೂಚನೆ ಮೇರೆಗೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂಥ್, ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದರು. ಖುದ್ದು ಸಿಎಂ ಬಿಎಸ್ವೈ ಭೇಟಿಯಾಗಿ ಗುಪ್ತಚರ ಇಲಾಖೆ ಕಲೆಹಾಕಿರುವ ಮಾಹಿತಿಯನ್ನು ಸಿಎಂಗೆ ವಿವರಿಸಿದರು. ಮಾಧ್ಯಮಗಳ ಜೊತೆ ಸಿಎಂ ಮಾತನಾಡುವ ಮುನ್ನ ಕಮಲ್ ಪಂಥ್ರಿಂದ ಸಿಎಂ ಸಮಗ್ರ ಮಾಹಿತಿ ಪಡೆದುಕೊಂಡರು.
TAGGED:
Karnataka CAA protest news