ಬೆಂಗಳೂರು:ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲು ಮಂಗಳವಾರ(ಇಂದು) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಿದ್ದಾರೆ.
ದೆಹಲಿಗೆ ಸಿಎಂ ಪ್ರಯಾಣ... ಟ್ರಂಪ್ ಜೊತೆ ಔತಣಕೂಟದಲ್ಲಿ ಯಡಿಯೂರಪ್ಪ ಭಾಗಿ - ಶಿವಮೊಗ್ಗ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ಯಡಿಯೂರಪ್ಪ
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳುತ್ತಿದ್ದಾರೆ.
ಶಿವಮೊಗ್ಗ ಪ್ರವಾಸದಲ್ಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಳಗ್ಗೆ 9 ಗಂಟೆಗೆ ಶಿಕಾರಿಪುರದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ 11.45ರ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ.
ಮಂಗಳವಾರ ರಾತ್ರಿ 8 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಔತಣಕೂಟದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ನಂತರ ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದು, ಬುಧವಾರ ಬೆಳಗ್ಗೆ 6.20 ಕ್ಕೆ ದೆಹಲಿಯಿಂದ ಹೊರಟು 9.05 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.