ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಸಂಬಂಧ ಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ರಾಜ್ಯದಲ್ಲಿ ವರುಣನ ಆರ್ಭಟ: ನೆರೆಪೀಡಿತ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ - CM Yediyurappa
ಗೃಹ ಕಚೇರಿ ಕೃಷ್ಣಾದಿಂದ ಇಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಸಂವಾದ ನಡೆಸಲಿರುವ ಸಿಎಂ ಯಡಿಯೂರಪ್ಪ, ನೆರೆಹಾನಿಗೊಳಗಾಗಿರುವ 12 ಜಿಲ್ಲೆಗಳ ಪರಿಸ್ಥಿತಿ ಅವಲೋಕನ ಮಾಡಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ಇಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಸಂವಾದ ನಡೆಸಲಿರುವ ಸಿಎಂ ಯಡಿಯೂರಪ್ಪ, ನೆರೆಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ ಅವಲೋಕನ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅವಶ್ಯಕ ಮಾಹಿತಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸುವಂತೆ ಸೂಚಿಸಲಾಗಿದೆ. ಜೊತೆಗೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾ ಕೇಂದ್ರಗಳಿಂದ ಅಥವಾ ತಾವಿರುವ ಸ್ಥಳಗಳಿಂದಲೇ ಅವಶ್ಯಕ ಮಾಹಿತಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ವೀಡಿಯೋ ಸಂವಾದ ನಡೆಸುವ ಜಿಲ್ಲೆಗಳು:
1. ಉಡುಪಿ
2. ಉತ್ತರ ಕನ್ನಡ
3. ದಕ್ಷಿಣ ಕನ್ನಡ
4. ಕೊಡಗು
5. ಹಾಸನ
6. ಚಿಕ್ಕಮಗಳೂರು
7. ಶಿವಮೊಗ್ಗ
8.ಕಲಬುರಗಿ
9. ಕೊಪ್ಪಳ
10.ವಿಜಯನಗರ
11.ವಿಜಯಪುರ
12. ಬಳ್ಳಾರಿ