ಬೆಂಗಳೂರು: ಕೊರೊನಾ ಎರಡನೇ ಅಲೆಯ ನಡುವೆಯೂ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭಗೊಳ್ಳುತ್ತಿದೆ. ಸಾಂಕ್ರಾಮಿಕದ ಆತಂಕವನ್ನು ಬಿಟ್ಟು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.
ಇಂದಿನಿಂದ ಎಸ್ಸೆಸ್ಸೆಲ್ಸಿ Exam: ಪರೀಕ್ಷಾರ್ಥಿಗಳಿಗೆ ಶುಭ ಕೋರಿದ ಸಿಎಂ ಬಿಎಸ್ವೈ
ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸಿಎಂ ಬಿಎಸ್ವೈ
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Last Updated : Jul 19, 2021, 6:22 AM IST