ಬೆಂಗಳೂರು:ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎನ್ನುವ ಬೇಡಿಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಬಂದಿದ್ದು, ಲಾಕ್ಡೌನ್ ಮುಂದುವರೆಸುತ್ತಾ ಹೋದರೆ ಆರ್ಥಿಕ ಚಟುವಟಿಕೆಗೆ ಏನಪ್ಪಾ ಮಾಡೋದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಬೆಳಗಾವಿ ಉಸ್ತುವಾರಿ ಸಚಿವರಾದ ಡಿಸಿಎಂ ಗೋವಿಂದ ಕಾರಜೋಳ, ಮೈಸೂರು ಉಸ್ತುವಾರಿ ಎಸ್.ಟಿ ಸೋಮಶೇಖರ್, ತುಮಕೂರು ಉಸ್ತುವಾರಿ ಮಾಧುಸ್ವಾಮಿ, ಶಿವಮೊಗ್ಗ ಉಸ್ತುವಾರಿ ಈಶ್ವರಪ್ಪ ಲಾಕ್ಡೌನ್ ವಿಸ್ತರಣೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಕೂಡ ಕೊರೊನಾ ನಿಯಂತ್ರಣಕ್ಕೆ ಮತ್ತೊಂದು ವಾರ ಲಾಕ್ಡೌನ್ ಮುಂದುವರೆಸುವಂತೆ ಮನವಿ ಮಾಡಿದರು.