ಬೆಂಗಳೂರು:ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ವೇಳೆ, ಪಕ್ಷದ ರಾಜ್ಯ ಉಪಾಧ್ಯಕ್ಷರೂ ಆಗಿರುವ ಸಿಎಂ ಪುತ್ರ ವಿಜಯೇಂದ್ರ ಕೂಡ ಉಪಸ್ಥಿತರಿದ್ದರು.
ಬಿ ವೈ ವಿಜಯೇಂದ್ರ ಕೂಡ ಜೆ.ಪಿ. ನಡ್ಡಾ ಮತ್ತು ಬಿಎಸ್ವೈ ಭೇಟಿ ವೇಳೆ ಹಾಜರಿದ್ದಿದ್ದು, ಹಲವು ಕುತೂಹಲಗಳಿಗೆ ಕಾರಣವಾಗಿದೆ. ಆಡಳಿತದಲ್ಲಿ ಹಸ್ತಕ್ಷೇಪ ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಸಿಎಂ ಜೊತೆಗೂಡಿ ಪುತ್ರ ವಿಜಯೇಂದ್ರ ಕೂಡ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.