ಬೆಂಗಳೂರು: ನಟಸಾರ್ವಭೌಮ ಡಾ. ರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗ, ನಾಡು, ನುಡಿ ಬಗ್ಗೆ ನೀಡಿರುವ ಕೊಡುಗೆ ಅವಿಸ್ಮರಣೀಯ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಅಣ್ಣಾವ್ರ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ರಾಜ್ಕುಮಾರ್ ಹಾಕಿ ಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸುವುದೇ ನಾವೆಲ್ಲಾ ಅವರಿಗೆ ಕೊಡುವ ಗೌರವ: ಬಿಎಸ್ವೈ - ನಟಸಾರ್ವಭೌಮ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ
ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ನಟಸಾರ್ವಭೌಮ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಡಾ. ರಾಜ್ ಕುಮಾರ್
ಕನ್ನಡ ಕಲಾ ಲೋಕದ ಧ್ರುವತಾರೆ, ಅಭಿಮಾನಿಗಳನ್ನು ದೇವರೆಂದು ಕರೆದ ವಿನಯದ ಮೇರು ಎಂದು ತಮ್ಮ ಟ್ವೀಟ್ನಲ್ಲಿ ಬಿಎಸ್ವೈ ಬಣ್ಣಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಅವರು ಕನ್ನಡ ನಾಡು, ನುಡಿಗೆ ಸಲ್ಲಿಸಿದ ಅಮೋಘ ಸೇವೆ ಅವಿಸ್ಮರಣೀಯ. ಕನ್ನಡ ನಾಡು, ನುಡಿಗಳ ಬಗ್ಗೆ ಅವರು ಹಾಕಿ ಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸುವುದೇ ಅವರ ಹುಟ್ಟುಹಬ್ಬದಂದು ನಾವು ಸಲ್ಲಿಸುವ ನಿಜವಾದ ಗೌರವ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.