ಕರ್ನಾಟಕ

karnataka

ETV Bharat / city

ಕರ್ನಾಟಕದಲ್ಲಿ ವ್ಯಾಪಕ ಶೀತಗಾಳಿ : ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಚಳಿ..!

Cold wave in Karnataka: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ಧಾರವಾಡ, ಹುಬ್ಬಳ್ಳಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆಯಲ್ಲಿ ಇನ್ನೂ 3 ದಿನಗಳ ಕಾಲ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

old-weather
ಹವಾಮಾನ ಇಲಾಖೆ

By

Published : Dec 25, 2021, 1:15 PM IST

ಬೆಂಗಳೂರು : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚಳಿ ಹೊಡೆತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ದಟ್ಟ ಮಂಜು ಕವಿದ ವಾತಾವರಣ ಉಂಟಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka weather report : ರಾಜ್ಯದ ಉತ್ತರ ಒಳನಾಡಿನ ಬೀದರ್‌, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ದಾಖಲಾಗಿದೆ. ಕೊಡಗು, ಶಿವಮೊಗ್ಗ, ಬೆಂಗಳೂರು, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಲ್ಲಿ ವಿಪರೀತ ಚಳಿ ಉಂಟಾಗಿದೆ.

ಕೆಲವೆಡೆ 15ರಿಂದ 16 ಡಿಗ್ರಿ ಸೆಲ್ಸಿಯಸ್​ಗೆ ಬಂದಿದೆ. ಹೀಗಾಗಿ ಜನರು ಸ್ವೆಟರ್​​​, ವುಲನ್​​​​​ ಟೋಪಿಗಳು ಸೇರಿದಂತೆ ಬೆಚ್ಚಗಿನ ಉಡುಪುಗಳ ಮೊರೆ ಹೋಗಿದ್ದಾರೆ. ಮಳೆ ಅಬ್ಬರದ ನಂತರ ಕರ್ನಾಟಕದಲ್ಲಿ ಶೀತಗಾಳಿ ಶುರುವಾಗಿದೆ.

ಇನ್ನೂ 3 ದಿನ ಚಳಿ :ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ಧಾರವಾಡ, ಹುಬ್ಬಳ್ಳಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆಯಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details