ಕರ್ನಾಟಕ

karnataka

ETV Bharat / city

ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ರಾಜಧಾನಿ ಸಿದ್ಧ: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಆಗಸ್ಟ್ 15 ರಂದು ಬೆಳಗ್ಗೆ 8.45 ಕ್ಕೆ ಮಾನ್ಯ ಮುಖ್ಯಮಂತ್ರಿಯವರು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಮಾಣಿಕ್ ಷಾ ಪರೇಡ್ ಮೈದಾನ
Commissioner Tushar Girinath press meet about independence day in Bangalore

By

Published : Aug 13, 2022, 4:37 PM IST

ಬೆಂಗಳೂರು : 75 ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಹೇಳಿದರು.

ಇಂದು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಆಗಸ್ಟ್ 15 ರಂದು ಬೆಳಗ್ಗೆ 8.45 ಕ್ಕೆ ಮಾನ್ಯ ಮುಖ್ಯಮಂತ್ರಿಯವರು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.

1,200 ಮಂದಿಯಿಂದ ಪಂಥಸಂಚಲನ :ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್ , ಬಿ.ಎಸ್.ಎಫ್, ಸಿ.ಎ.ಆರ್, ಕೆ.ಎಸ್.ಐ.ಎಸ್.ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಆಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ನ ಒಟ್ಟು 36 ತುಕಡಿಗಳಲ್ಲಿ ಸುಮಾರು 1,200 ಮಂದಿ ಪಂಥಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಿಕ್ಕೇರಿ ಕೃಷ್ಣಮೂರ್ತಿ ಅವರ ತಂಡದ ಗೀತಗಾಯನದಿಂದ ಕಾರ್ಯಕ್ರಮ ಆರಂಭ :ಕಿಕ್ಕೇರಿ ಕೃಷ್ಣಮೂರ್ತಿ ಅವರ ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ, ಬೆಂಗಳೂರು ಉತ್ತರ ಜಿಲ್ಲೆಯ ಚಿಕ್ಕಬಿದರಕಲ್ಲು ಸರ್ಕಾರಿ ಫ್ರೌಡಶಾಲೆಯ 800 ಮಕ್ಕಳು 'ಅಮೃತ ಮಹೋತ್ಸವದ ಭಾರತದ ಸಂಭ್ರಮದ' ನೃತ್ಯ ಪ್ರದರ್ಶಿಸಲಿದ್ದಾರೆ.

ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 800 ಮಕ್ಕಳು 'ಈಸೂರು ಹೋರಾಟ' ಹಾಗೂ ಗುರಪ್ಪನಪಾಳ್ಯದ ಲಿಲ್ಲಿ ರೋಜ್ ಪ್ರೌಢಶಾಲೆಯ 850 ಮಕ್ಕಳು 'ಜೈ ಜವಾನ್ ಜೈ ಕಿಸಾನ್' ಕಾರ್ಯಕ್ರಮವನ್ನು ನಡೆಸಿಕೊಳ್ಳಲಿದ್ದಾರೆ. ಎಂಇಜಿ ತಂಡದವರು ಟೆಂಟ್ ಪೆಗ್ಗಿಂಗ್, ಕೊಂಬ್ಯಾಟ್ ಫ್ರೀ ಫಾಲ್ ಮತ್ತು ಉತ್ತಮ ದೇಹದಾರ್ಢ್ಯ ಸಹಾಸ ಪ್ರದರ್ಶನವನ್ನು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಹೆಚ್ಚು ಸಾರ್ವಜನಿಕರು ಕಾರ್ಯಕ್ರಮ ವೀಕ್ಷಣೆಗೆ ಅವಕಾಶ :ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಾರಿ ಸಾರ್ವಜನಿಕರಿಗಾಗಿ ಇರುವ ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.

1,700 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ :ಸುದ್ದಿಗೋಷ್ಟಿಯಲ್ಲಿ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಿ.ಹೆಚ್ ಪ್ರತಾಪ್ ರೆಡ್ಡಿ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ 1,700 ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. 9 ಡಿ.ಸಿ.ಪಿ ,10 ಕೆ.ಎಸ್.ಆರ್.ಪಿ ತುಕಡಿಗಳು ಹಾಗೂ ಕಿರಿಯ ಅಧಿಕಾರಿಗಳನ್ನು ಭದ್ರತ ವ್ಯವಸ್ಥೆಗೆ ನಿಯೋಜಿಸಲಾಗಿದೆ ಎಂದರು.

100 ಸಿಸಿ ಕ್ಯಾಮರಾ ಅಳವಡಿಕೆ :ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮರ್ ವ್ಯವಸ್ಥೆ ಹಾಗೂ ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತರಾದ ಸಂದೀಪ್ ಪಾಟಿಲ್, ಸಂಚಾರಿ ಪೊಲೀಸ್ ಜಂಟಿ ಆಯುಕ್ತರಾದ ರವಿಕಾಂತೆ ಗೌಡ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು.. ಸಿಎಂ ಬಸವರಾಜ ಬೊಮ್ಮಾಯಿ ಕರೆ

ABOUT THE AUTHOR

...view details