ಕರ್ನಾಟಕ

karnataka

ETV Bharat / city

ಧಾರವಾಡ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ - cm on dharawada accident

ಧಾರವಾಡ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿದೆ.

cm basavaraja bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : May 22, 2022, 10:44 AM IST

ಬೆಂಗಳೂರು: ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಧಾರವಾಡದ ಬಾಡ ಗ್ರಾಮದ ಬಳಿ ನಡೆದ ದುರ್ಘಟನೆಯಲ್ಲಿ ಮಡಿದ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ದುರ್ಘಟನೆ: ಬಾಡ ರಸ್ತೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಅಪಘಾತ ಸಂಭವಿಸಿದೆ. ವಧುವಿನ ಕಡೆಯವರನ್ನು ಕರೆದುಕೊಂಡು ಬಂದಿದ್ದ ಕ್ರೂಸರ್ ಇದಾಗಿದ್ದು, ಅದೇ ಕ್ರೂಸರ್‌ನಲ್ಲಿ ಜನರು ನಿಗದಿ ಗ್ರಾಮಕ್ಕೆ ಹೊರಟಿದ್ದರು. ನಿಶ್ಚಿತಾರ್ಥ ಕಾರ್ಯದ ಬಳಿಕ ಕಲ್ಯಾಣ ಮಂಟಪಕ್ಕೆಂದು ನಿಗದಿಗೆ ಹೊರಟಿದ್ದಾಗ ಅಪಘಾತವಾಗಿದೆ.

ಇದನ್ನೂ ಓದಿ:ಗೋವಾದಲ್ಲಿ ಭೀಕರ ಅಪಘಾತ: ಬೆಳಗಾವಿಯ ಮೂವರು ಯುವಕರ ದುರ್ಮರಣ

ABOUT THE AUTHOR

...view details