ಬೆಂಗಳೂರು:ಕೋವಿಡ್‌ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ ಕುಟುಂಬದ ಒಬ್ಬ ಕಾನೂನುಬದ್ಧ ವಾರಸುದಾರರಿಗೆ 'ಸಂಧ್ಯಾ ಸುರಕ್ಷಾ ಯೋಜನೆ’ ಅಡಿ 1.00 ಲಕ್ಷ ರೂ. ಹಾಗೂ ಕೇಂದ್ರದ ಮಾರ್ಗಸೂಚಿ ಅನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 50,000 ರೂ. ಸೇರಿದಂತೆ ಒಟ್ಟು 1.50 ಲಕ್ಷ ರೂ. ಪರಿಹಾರ ಹಣ ನೀಡಲು ಸರ್ಕಾರ ಮುಂದಾಗಿದೆ.
ಕೊರೊನಾದಿಂದ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ: ಹೀಗೆ ಅರ್ಜಿ ಸಲ್ಲಿಸಿ - ಕೋವಿಡ್ ಮೃತ ಕುಂಟುಂಬಸ್ಥರಿಗೆ ಪರಿಹಾರ ಹಣ
ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರು ಪರಿಹಾರದ ಹಣ ಪಡೆಯಲು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ.
ಬಿಬಿಎಂಪಿ ಪ್ರಕಟಣೆ
ಅದರಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ಧನ ನೀಡುವ ಸಂಬಂಧ ಆದೇಶ ಹೊರಡಿಸಲಾಗಿದೆ. ಅದರಂತೆ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರು ದಾಖಲೆಗಳ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.