ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ಧ ಎಸಿಬಿಗೆ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆ ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ. ಹೆಲ್ಪಿಂಗ್ ಸಿಟಿಜನ್ ಅಂಡ್ ಪೀಪಲ್ಸ್ ಕೋರ್ಟ್ ಎಜಿಒ ಸಂಸ್ಥಾಪಕ ಅಲಂ ಪಾಷ ದೂರು ಸಲ್ಲಿಸಿದ್ದಾರೆ.
ಸಲೀಂ ಹಾಗೂ ಉಗ್ರಪ್ಪ ಸಂಭಾಷಣೆ ಅಕ್ಷರಶಃ ಸತ್ಯವಾಗಿದೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಡಿಕೆಶಿ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣ ಗೊತ್ತಿದೆ. ಅವರು ನೀರಾವರಿ ಹಾಗೂ ಜಲ ಸಂಪನ್ಮೂಲ ಇಲಾಖೆ ಸಚಿವಾರಾಗಿದ್ದಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೊಪಿಸಲಾಗಿದೆ.
ಡಿಕೆಶಿ 8 ರಿಂದ 12 ಪರ್ಸೆಂಟೇಜ್ ಕಮಿಷನ್ ಪಡೆದಿದ್ದಾರೆ. 2023ರ ಚುನಾವಣೆಗಾಗಿ ಕೋಟಿ ಕೋಟಿ ಭ್ರಷ್ಟಾಚಾರದ ಹಣ ಸಂಪಾದನೆ ಮಾಡಿದ್ದಾರೆ. ಅಕ್ರಮ ಹಣ ಸಂಪಾದನೆ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಆರೋಪಿಸಲಾಗಿದೆ.