ಬೆಂಗಳೂರು:ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. 2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ ಹೆಚ್‌ಡಿಕೆ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
2ನೇ ಪತ್ನಿ, ಪುತ್ರಿ ಮತ್ತು ಮಗನ ಬಗ್ಗೆ ತಪ್ಪು ಮಾಹಿತಿ ಆರೋಪ.. ಹೆಚ್‌ಡಿಕೆ ವಿರುದ್ಧ ವಿಶೇಷ ಕೋರ್ಟ್‌ನಲ್ಲಿ ದೂರು! - complaint
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಈಗ ಮತ್ತೊಂದು ಸಂಕಷ್ಟ...2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿರುವ ಆರೋಪ...ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣದಿಂದ ಏಕ ಕಾಲಕ್ಕೆ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಆದರೆ, ನಾಮಪತ್ರ ಸಲ್ಲಿಸುವ ವೇಳೆ ಹೆಚ್‌ಡಿಕೆ ಸಲ್ಲಿಸಿದ್ದ ಅಫಿಡೆವಿಟ್‌ನಲ್ಲಿ ಕುಟುಂಬ ಸದಸ್ಯರ ಬಗೆಗಿನ ಮಾಹಿತಿ ಮರೆಮಾಚಲಾಗಿದೆ. 2ನೇ ಪತ್ನಿ ನಟಿ ರಾಧಿಕಾ, ಪುತ್ರಿ ಶರ್ಮಿಕಾ ಹಾಗೂ ಪುತ್ರ ನಿಖಿಲ್ ಬಗ್ಗೆ ಯಾವುದೇ ಮಾಹಿತಿ ಉಲ್ಲೇಖಿಸಿಲ್ಲ. ಆ ಮೂಲಕ ಹೆಚ್‌ಡಿಕೆ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದು ಜನಪ್ರಿನಿಧಿಗಳ ಕಾಯ್ದೆ 125 ಐಪಿಸಿ 181ರ ಅಡಿ ಕಾನೂನು ಬಾಹಿರ ನಡೆ. ಹಾಗಾಗಿ ಕುಮಾರಸ್ವಾಮಿ ವಿರುದ್ಧ ಕ್ರಮಕೈಗೊಳ್ಳಬೇಕು ಅಂತಾ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಬಗ್ಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಆನಂದ್ ಸಲ್ಲಿಸಿದ ಅರ್ಜಿಯನ್ನ ವಿಶೇಷ ನ್ಯಾಯಾಲಯ ವಿಚಾರಣೆಗೆ ಮಾನ್ಯ ಮಾಡಿದೆ.