ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಿರಿ ಹೆಚ್ಚುತ್ತಿದ್ದು, ಇದರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಕಾರಿನ ಮೇಲೆ ನಿನ್ನೆ ನಡೆದ ದಾಳಿ ಖಂಡಿಸಿದ ಅವರು, ಸೋಲಿನ ಹತಾಶೆಯಿಂದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಗೂಂಡಾಗಿರಿ ಪ್ರದರ್ಶಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳ ಅನುಷ್ಠಾನದಿಂದಾಗಿ ಟಿಎಂಸಿ ಸೋಲಿನ ಭೀತಿಯಲ್ಲಿದೆ. ಅದೇ ಕಾರಣಕ್ಕಾಗಿ ಬಾಂಬ್ ದಾಳಿ, ಕಲ್ಲೆಸೆತದಂತಹ ದುಷ್ಕೃತ್ಯಗಳಿಗೆ ಅವರು ಮುಂದಾಗುತ್ತಿದ್ದಾರೆ ಎಂದು ದೂರಿದರು.