ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣ ಈಗಾಗಲೇ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈ ಮಧ್ಯೆ ರಾಜ್ಯದಲ್ಲಿ 1-9ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯುತ್ತೋ, ಇಲ್ವೋ ಎಂಬುದರ ಕುರಿತು ಇನ್ನೂ ಅಧಿಕೃತ ತೀರ್ಮಾನ ಹೊರಬಿದ್ದಿಲ್ಲ.
ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಳೆದ ಸೋಮವಾರ ಖಾಸಗಿ ಶಾಲೆಗಳ ಸಂಘಟನೆಗಳ ಸದಸ್ಯರು, ಶಿಕ್ಷಣ ತಜ್ಞರೊಂದಿಗೆ ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆಸಿದ್ದರು. ಯಾವುದಾದರೂ ಒಂದು ಮಾದರಿಯಲ್ಲಿ ಕಲಿಕೆಯ ಮೌಲ್ಯಾಂಕನ ಮಾಡಬೇಕೆಂದು ಖಾಸಗಿ ಸಂಘಟನೆಗಳು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಎಲ್ಲರ ಅಭಿಪ್ರಾಯ ಸಂಗ್ರಹಿಸಿರುವ ಶಿಕ್ಷಣ ಸಚಿವರು, ಇಂದು ಇಲಾಖೆಯ ಆಯುಕ್ತರು, ಪ್ರಧಾನ ಕಾರ್ಯದರ್ಶಿ, ಶಿಕ್ಷಣ ತಜ್ಞರೊಂದಿಗೆ ಮತ್ತೊಂದು ಸಭೆ ನಡೆಸಿ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ. ಎರಡು ದಿನಗಳಲ್ಲಿ ಅಂತಿಮ ತೀರ್ಮಾನ ಹೇಳುವುದಾಗಿ ತಿಳಿಸಿದ್ದ ಸಚಿವರು, ಇಂದು ಪ್ರಧಾನಿ ಮೋದಿ ಅವರ ಸಭೆಯ ನಂತರ ಸಚಿವರು ಇನ್ನೊಮ್ಮೆ ಸಭೆ ಮಾಡಲಿದ್ದಾರೆ.