ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರವೀಣ್ ಪೀಟರ್ ಇಂದು ನಾಮಪತ್ರ ಸಲ್ಲಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ನಿಂದ ಪ್ರವೀಣ್ ಪೀಟರ್ ನಾಮಪತ್ರ ಸಲ್ಲಿಕೆ - Praveen Peter as nominee for Congress candidate
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮೂರು ಅವಧಿಗೆ ಜೆಡಿಎಸ್ನಿಂದ ಆಯ್ಕೆಯಾಗಿರುವ ಪುಟ್ಟಣ್ಣ ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಜೆಡಿಎಸ್ನಿಂದ ಎಪಿ ರಂಗನಾಥ್ ಹಾಗೂ ಕಾಂಗ್ರೆಸ್ ನಿಂದ ಪ್ರವೀಣ್ ಪೀಟರ್ ಅಭ್ಯರ್ಥಿಯಾಗಿದ್ದಾರೆ.
![ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ನಿಂದ ಪ್ರವೀಣ್ ಪೀಟರ್ ನಾಮಪತ್ರ ಸಲ್ಲಿಕೆ Congress candidate Praveen Peter nominates file from the Teacher field](https://etvbharatimages.akamaized.net/etvbharat/prod-images/768-512-9074135-774-9074135-1601991546091.jpg)
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ನಾರಾಯಣಸ್ವಾಮಿ ಶಾಸಕರುಗಳಾದ ರಿಜ್ವಾನ್ ಅರ್ಷದ್ ಮತ್ತು ಎನ್.ಎ. ಹ್ಯಾರಿಸ್ ಅವರು ಉಪಸ್ಥಿತರಿದ್ದರು. ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ ಹಿಂಭಾಗ ಇರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮೂರು ಅವಧಿಗೆ ಜೆಡಿಎಸ್ ನಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಜೆಡಿಎಸ್ನಿಂದ ಎಪಿ ರಂಗನಾಥ್ ಹಾಗೂ ಕಾಂಗ್ರೆಸ್ ನಿಂದ ಪ್ರವೀಣ್ ಪೀಟರ್ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿಗೆ ತೀವ್ರ ಪೈಪೋಟಿ ನೀಡಲಿದ್ದಾರೆ.