ಕರ್ನಾಟಕ

karnataka

ETV Bharat / city

ಬಿಎಸ್​ವೈ ಹೇಳಿಕೆ ಖಂಡಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್​​ - undefined

ಕಾಂಗ್ರೆಸ್​ಗೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ಹೇಳಿಕೆ ನೀಡಿದ್ದ ಬಿ.ಎಸ್‍.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಬಿ.ಎಸ್‍. ಯಡಿಯೂರಪ್ಪ

By

Published : May 15, 2019, 9:00 PM IST

ಬೆಂಗಳೂರು:ಕಾಂಗ್ರೆಸ್​ಗೆ ಲಿಂಗಾಯತರು ಮತ ಹಾಕುವುದು ಅಪರಾಧ ಎಂಬ ಮಾಜಿ ಸಿಎಂ ಬಿ.ಎಸ್‍.ಯಡಿಯೂರಪ್ಪ ಹೇಳಿಕೆ ಖಂಡಿಸಿರುವ ಕಾಂಗ್ರೆಸ್, ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕಾಂಗ್ರೆಸ್​ಗೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ಚಿಂಚೋಳಿ ಪ್ರಚಾರದ ವೇಳೆ ಬಿಎಸ್​ವೈ ಹೇಳಿಕೆ ನೀಡಿದ್ದರು. ಇದನ್ನೆ ಆಧಾರವಾಗಿಟ್ಟುಕೊಂಡು ಕಾಂಗ್ರೆಸ್​ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿ.ಎಸ್‍.ಯಡಿಯೂರಪ್ಪ ವಿರುದ್ಧ ದೂರು

ಒಂದು ಸಮುದಾಯವನ್ನು ಪ್ರಚೋದಿಸುವ ರೀತಿ ಬಿಎಸ್‍ವೈ ಹೇಳಿಕೆ ನೀಡಿದ್ದಾರೆ. ಈ ಮೂಲಕ ಜಾತಿಯಾಧಾರಿತ ಪ್ರಚೋದನೆ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿ ನಿಲುವು. ಬಿಎಸ್​ವೈ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್​ ದೂರಿನಲ್ಲಿ ಆಗ್ರಹಿಸಿದೆ.

ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 123(3) ಅಡಿ ಯಡಿಯೂರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದಿಂದ ದೂರು ಸಲ್ಲಿಕೆಯಾಗಿದೆ.

For All Latest Updates

TAGGED:

ABOUT THE AUTHOR

...view details