ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೆಸರೇ ಕಾನ್ಸ್ಪಿರೆಸ್ಸಿ (ಷಡ್ಯಂತ್ರ) ಪಾರ್ಟಿ ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಭ್ರಷ್ಟಾಚಾರದ ಆರೋಪವೂ ಷಡ್ಯಂತ್ರ. ಅವರ ಷಡ್ಯಂತ್ರಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಷಡ್ಯಂತ್ರ ಪಾರ್ಟಿಯಾಗಿದೆ. ಬಿಜೆಪಿ ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸುವ ಪಕ್ಷವಾಗಿದೆ. ಬಿಜೆಪಿ ಸಕಾರಾತ್ಮಕ ಬೆಳವಣಿಗೆಯಲ್ಲಿ ಕೆಲಸ ಮಾಡುತ್ತಿದೆ. ದೇಶಾದ್ಯಂತ ಕಾಂಗ್ರೆಸ್ ನಾಶವಾಗುತ್ತಿದೆ. ಈ ಸಂದರ್ಭದಲ್ಲಿ ಬರೀ ಷಡ್ಯಂತ್ರ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ. ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಭ್ರಷ್ಟಾಚಾರದ ಆರೋಪವೂ ಷಡ್ಯಂತ್ರ. ಅವರ ಷಡ್ಯಂತ್ರಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ ಎಂದರು.