ಕರ್ನಾಟಕ

karnataka

ETV Bharat / city

ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಪೋರೆಟರ್​​ಗಳಿಂದ ಪ್ರತಿಭಟನೆ - ಕಾಂಗ್ರೆಸ್ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು

ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿಕೆಶಿ ಬಂಧನ ವಿರುದ್ಧ ರಾಜ್ಯಾದ್ಯಂತ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಪೋರೆಟರ್ಸ್ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಪೋರೇಟರ್ಸ್ ಪ್ರತಿಭಟನೆ

By

Published : Sep 4, 2019, 6:04 PM IST

ಬೆಂಗಳೂರು:ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಪೋರೆಟರ್ಸ್ ಪ್ರತಿಭಟನೆ

ನಗರದ ನವರಂಗ್ ಸರ್ಕಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ನೂರಾರು ಜನ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಭಟಿಸಿದರು‌. ಕಾರ್ಪೋರೆಟರ್​ಗಳಾದ ಕೇಶವಮೂರ್ತಿ, ಮಂಜುನಾಥ್, ಶಿವರಾಜ್, ಕೃಷ್ಣ ಮೂರ್ತಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬಿಜೆಪಿ ದ್ವೇಷದ ರಾಜಕಾರಣ ಮಾಡಿದೆ. ಕಾನೂನಿನ ಮೇಲೆ ಪ್ರಭಾವ ಬೀರಿ ಬಂಧಿಸಿದ್ದಾರೆ ಎಂದು ಪ್ರತಿಭಟನಾಕಾರರು ಮೋದಿ, ಅಮಿತ್ ಶಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇನ್ನೊಂದೆಡೆ ಬೇಗೂರು ವಾರ್ಡ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರೂ ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದರು.

ABOUT THE AUTHOR

...view details