ಕರ್ನಾಟಕ

karnataka

ETV Bharat / city

ಉಪಚುನಾವಣೆಗೆ ಕೈ ಪಕ್ಷದ ತಯಾರಿ: ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಣತಂತ್ರ

ಉಪ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್​​ ನಾಯಕರ ಜೊತೆ ಶುಕ್ರವಾರ ‌ಸಭೆ ನಡೆಯಿತು.

ಕಾಂಗ್ರೆಸ್​​ ನಾಯಕರ ಸಭೆ

By

Published : Nov 24, 2019, 11:40 AM IST

ಬೆಂಗಳೂರು:ರಾಜ್ಯದಲ್ಲಿ ಉಪ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ನೇತೃತ್ವದಲ್ಲಿ ಚುನಾವಣೆ ಉಸ್ತುವಾರಿ ಹೊತ್ತಿರುವ ನಾಯಕರ ಜೊತೆ ಕೆಪಿಸಿಸಿ ಕಚೇರಿಯಲ್ಲಿ ‌ನಿನ್ನೆ ರಾತ್ರಿ ಸಭೆ ನಡೆಯಿತು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಸಂಬಂಧ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ಇದುವರೆಗೂ ನಡೆಸಿರುವ ಪ್ರಯತ್ನ ಹಾಗೂ ಮುಂದೆ ನಡೆಸಬೇಕಿರುವ ಕಾರ್ಯತಂತ್ರಗಳ ಕುರಿತು ಈ ಸಂದರ್ಭ ವೇಣುಗೋಪಾಲ್ ಮಾರ್ಗದರ್ಶನ ನೀಡಿದರು.

ಮಹಾರಾಷ್ಟ್ರ ಸರ್ಕಾರ ರಚನೆಗೆ ಆಕ್ರೋಶ

ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ಬಿಜೆಪಿ ಹಾಗೂ ಎನ್​​​ಸಿಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದನ್ನು ನೋಡಿದರೆ, ಪ್ರಜಾಪ್ರಭುತ್ವ ಎಲ್ಲಿದೆ ಎಂಬ ಪ್ರಶ್ನಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿಗೆ ಈ ವಿಚಾರದಲ್ಲಿ ಕೊಂಚವೂ ಕೀಳರಿಮೆ ಇಲ್ಲದಂತಾಗಿದೆ. ಬಿಜೆಪಿ ಮಾಡಿರುವ ಅಸಹ್ಯ ಕೆಲಸಕ್ಕೆ ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರುತ್ತದೆ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಿದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದೆವು. ಅದೇ ರೀತಿ ಮಹಾರಾಷ್ಟ್ರದ ವಿಚಾರದಲ್ಲೂ ಕೂಡ ಹಿಂದೆ ಸರಿಯುವುದಿಲ್ಲ. ಇನ್ನು ಮಹಾರಾಷ್ಟ್ರದಲ್ಲಿ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ನಾಲ್ಕೈದು ದಿನಗಳಲ್ಲಿ ಪತನವಾಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಭಾನುವಾರ ಕಾಂಗ್ರೆಸ್​​ ಪಕ್ಷದ ಶಾಸಕಾಂಗ ಸಭೆ ಕೂಡ ನಡೆಯಲಿದೆ. ಪಕ್ಷದ 44 ಶಾಸಕರು ಒಟ್ಟಾಗಿದ್ದು, ಎಲ್ಲರನ್ನೂ ರಕ್ಷಿಸಿಕೊಳ್ಳಲಿದ್ದೇವೆ. ರಾಜ್ಯಪಾಲರು ನೀತಿ ನಿಯಮಗಳನ್ನು ಮೀರಿ ರಾತ್ರೋರಾತ್ರಿಯೇ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಅದನ್ನು ಖಂಡಿಸುತ್ತೇವೆ. ಕಾಂಗ್ರೆಸ್​​​ ಶಿವಸೇನೆಗೆ ಬೆಂಬಲ ನೀಡುವ ಭರವಸೆಯನ್ನು ಶಾಸಕರ ಸಹಿ ಸಮೇತ ನೀಡಲಿದ್ದೇವೆ. ನಮ್ಮ ಜೊತೆಗೆ ಎನ್​​ಸಿಪಿಯೂ ಇರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕುದುರೆ ವ್ಯಾಪಾರ ನಡೆಸಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಈಗ ಮತ್ತೆ ಹಣ ಮತ್ತು ಅಧಿಕಾರದ ಬಲದಿಂದ ಉಪ ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದೆ. ಆಪರೇಷನ್​ ಕಮಲಕ್ಕೆ ಬಿಜೆಪಿ ಕೈ ಹಾಕಿದ ಪರಿಣಾಮ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಉಪಚುನಾವಣೆಯಲ್ಲಿ 15 ಸ್ಥಾನಗಳಲ್ಲೂ ಕಾಂಗ್ರೆಸ್​​ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಹಾಗೂ ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಅರಾಜಕತೆ ಪ್ರತಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಹಾಗೂ ಅಧಿವೇಶನದಲ್ಲೂ ಇದೇ ವಿಚಾರವನ್ನು ಪ್ರಸ್ತಾಪಿಸುತ್ತೇವೆ ಎಂದರು.

ABOUT THE AUTHOR

...view details