ಕರ್ನಾಟಕ

karnataka

ETV Bharat / city

ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಡಾ.ಡಿ.ತಿಮ್ಮಯ್ಯ ಕಣಕ್ಕೆ - ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್​ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದು ಕೈ ಅಭ್ಯರ್ಥಿಯಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಯಾಗಿ ಡಾ.ಡಿ.ತಿಮ್ಮಯ್ಯ ಕಣಕ್ಕೆ
ಕಾಂಗ್ರೆಸ್​ ಅಭ್ಯರ್ಥಿಯಾಗಿ ಡಾ.ಡಿ.ತಿಮ್ಮಯ್ಯ ಕಣಕ್ಕೆ

By

Published : Nov 22, 2021, 4:25 PM IST

Updated : Nov 22, 2021, 6:46 PM IST

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ (Karnataka Council Election) ಕಣದಿಂದ ಕಾಂಗ್ರೆಸ್​ನ ಮತ್ತೋರ್ವ ಸದಸ್ಯ ಹಿಂದೆ ಸರಿದಿದ್ದಾರೆ. ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್​ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದಾರೆ.


ಇವರ ಬದಲಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ (Dr.D.Timmaiah) ತಾವೇ ಈ ಬಾರಿ ಪರಿಷತ್ ಚುನಾವಣೆಯ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದುವರೆಗೂ 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ.

ತಿಮ್ಮಯ್ಯ ಅವರು ಇಂದು ಬೆಂಗಳೂರಿಗೆ ಆಗಮಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಟಿಕೆಟ್ ನನಗೆ ಅನ್ನೋದು ಕನ್ಫರ್ಮ್ ಆಗ್ತಿದೆ. ಹಾಗಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದೆ. ಕೊನೆಯ ಹಂತ ಮಾತ್ರ ಬಾಕಿಯಿದೆ. ನನಗೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಎಲ್ಲ ಹಿರಿಯ ನಾಯಕರಿಗೆ ನಾನು ಚಿರ ಋಣಿ ಎಂದರು.


ಆರ್.ಧರ್ಮಸೇನ ಅವರಿಗೆ ಇನ್ನೊಂದು ಅವಧಿಗೆ ಸ್ಪರ್ಧಿಸುವಂತೆ ಹಿರಿಯರಿಂದ ಸಲಹೆ ಬಂತು. ಆದರೆ ಬೇರೆ ಕಾರಣ ನೀಡಿ ಹಿಂದೆ ಸರಿದ್ದಾರೆ ಎಂಬ ಮಾಹಿತಿ ಇದೆ. ಮೈಸೂರು ಜಿಲ್ಲೆ ಯಾವುದಾದರೂ ವಿಧಾನಸಭೆ ಕ್ಷೇತ್ರದಿಂದ 2023 ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಧರ್ಮಸೇನ ಪರಿಷತ್​ಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಳೆ ನಾಮಪತ್ರ ಸಲ್ಲಿಕೆ:

ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, (Nomination for Council Election) ಇದುವರೆಗೂ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಪಟ್ಟಿ ಪ್ರಕಟವಾಗಿಲ್ಲ. ಆದರೆ ಕೆಲವೆಡೆ ಅಭ್ಯರ್ಥಿಗಳಾಗಿ ಘೋಷಣೆಯಾಗುವ ವಿಶ್ವಾಸ ಹೊಂದಿರುವ ಮುಖಂಡರು ತಮ್ಮ ಸಿದ್ಧತೆ ಆರಂಭಿಸಿದ್ದಾರೆ. ಡಾ.ತಿಮ್ಮಯ್ಯ ಸಹ ನಾಳೆ ಮೈಸೂರು ಕಾಂಗ್ರೆಸ್ ಭವನದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸ್ಥಳೀಯ ನಾಯಕರು ಇವರಿಗೆ ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆಯಲ್ಲಿ 6 ರಿಂದ 8 ಸ್ಥಾನ ಗೆಲ್ಲುವ ವಿಶ್ವಾಸ: ಹೆಚ್‌.ಡಿ.ಕುಮಾರಸ್ವಾಮಿ

Last Updated : Nov 22, 2021, 6:46 PM IST

ABOUT THE AUTHOR

...view details